Thursday, March 19, 2026
Thursday, March 19, 2026

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ

Date:

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.

ಈ ಪರಿಕಲ್ಪನೆಯ ಅಂಗವಾಗಿ ಇದೇ ಶನಿವಾರ ಬೆಳಗ್ಗೆ 11.00ಕ್ಕೆ ಶಿವಮೊಗ್ಗ ತಾಲೂಕು ನಿಧಿಗೆ-2ನೇ ಹೋಬಳಿ, ಗಾಜನೂರು ಗ್ರಾಮದ ಶ್ರೀ ತುಂಗಾ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ,ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆದ್ದರಿಂದ ಗಾಜನೂರು ಗ್ರಾಮಸ್ಥರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಶನಿವಾರದಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...