Friday, August 7, 2026
Friday, August 7, 2026

ರೈತರ ಹತ್ಯೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ

Date:

ಉತ್ತರ ಪ್ರದೇಶದ ಖೇರಿಯಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್ ಸುಂದರೇಶ್ ನೇತೃತ್ವದಲ್ಲಿ ನಗರದ ಗಾಂಧಿ ಪಾರ್ಕ್ ನಲ್ಲಿರುವ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದರು.

ಪ್ರತಿಭಟನಾನಿರತ  ರೈತರ ಗುಂಪಿನ ಮೇಲೆ ಕೇಂದ್ರದ ಬಿಜೆಪಿ ಸರ್ಕಾರದ ಗೃಹ ಖಾತೆ ಸಹಾಯಕ ಸಚಿವರಾದ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ  ಆಶಿಶ್ ಮಿಶ್ರಾ ಅವರು ವಾಹನವನ್ನು ನುಗ್ಗಿಸಿದ ಪರಿಣಾಮ ನಾಲ್ವರು ರೈತರು ಹತ್ಯೆಯಾಗಿದ್ದರು. ಹಾಗಾಗಿ ಈ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿ ರೈತರ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳುವಂತೆ ಮೌನ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ,ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ,ಕಾಂಗ್ರೆಸ್ ಮುಖಂಡರಾದ ವೈ.ಹೆಚ್ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jog Falls ಪ್ರತೀ ಶನಿವಾರ & ಭಾನುವಾರ ರಸ್ತೆ ಸಾರಿಗೆ ನಿಗಮದಿಂದಸಿಗಂದೂರು- ಜೋಗ ಪ್ರವಾಸಿ ಪ್ಯಾಕೇಜ್ ಘೋಷಣೆ.

Jog Falls ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ಫಾಲ್ಸ್...

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....