Saturday, July 11, 2026
Saturday, July 11, 2026

ಐಪಿಎಲ್-14 ಕ್ರಿಕೆಟ್ ಪುರಸ್ಕಾರ

Date:

ಐಪಿಎಲ್ 2021 ಸೀಸನ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕೆಲ ಆಟಗಾರರು ವಿಶೇಷ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 14 ನಲ್ಲಿ CSK ತಂಡವು ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ಫೈನಲ್ ನಲ್ಲಿ ಮಿಂಚಿದ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಫಾಫ್ ಡುಪ್ಲೆಸಿಸ್ ಪಡೆದಿದ್ದಾರೆ. CSK ತಂಡದ ರುತುರಾಜ್ ಗಾಯಕ್ವಾಡ್ ಅವರಿಗೆ ಎಮರ್ಜಿಂಗ್ ಪ್ಲೇಯರ್ ಪ್ರಶಸ್ತಿ ಲಭಿಸಿದೆ. ಹಾಗೆಯೇ ರಾಜಸ್ತಾನ ರಾಯಲ್ಸ್ ತಂಡಕ್ಕೆ ಕ್ರೀಡಾಸ್ಫೂರ್ತಿಯಿಂದ ಆಡಿದ ತಂಡಕ್ಕೆ ನೀಡುವ ಫೇರ್ ಪ್ರಶಸ್ತಿ ಪಡೆದಿದೆ. ಕ್ಯಾಚ್ ಆಫ್ ದಿ ಸೀಸನ್ ಪ್ರಶಸ್ತಿ ಪಂಜಾಬ್ ಕಿಂಗ್ಸ್ ತಂಡದ ರವಿ ಬಿಷ್ಣೋಯ್ ಗೆ ಲಭಿಸಿದೆ. ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿ KKR ತಂಡದ ವೆಂಕಟೇಶ್ ಅಯ್ಯರ್ ಪಡೆದಿದ್ದಾರೆ. ಗೇಮ್ ಚೇಂಜರ್ ಆಫ್ ದಿ ಸೀಸನ್ -RCB ಯ ಹರ್ಷಲ್ ಪಟೇಲ್ ಅವರಿಗೆ ಸಿಕ್ಕಿದೆ. ಸೀಸನ್ನಲ್ಲಿ 635 ರನ್ ಬಾರಿಸಿದ ರುತುರಾಜ್ ಗಾಯಕ್ವಾಡ್ ಆರೆಂಜ್ ಕ್ಯಾಪ್ ಪಡೆದಿದ್ದಾರೆ. RCB ತಂಡದ ಬಾಲರ್ ಹರ್ಷಲ್ ಪಟೇಲ್ 32 ವಿಕೆಟ್ ಗಳನ್ನು ಪಡೆದು ಪರ್ಪಲ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಸೀಸನ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರಿಗೆ ನೀಡುವ ಪ್ರಶಸ್ತಿ 30 ಸಿಕ್ಸ್ ಬಾರಿಸಿದ K.L. ರಾಹುಲ್ ಅವರ ಪಾಲಾಗಿದೆ. ಒಟ್ಟಾರೆ ಐಪಿಎಲ್ 2021ರ ಆವೃತ್ತಿ ಮುಗಿದಿದ್ದರೂ ಕೂಡ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕೆಲವು ಆಟಗಾರರು ಪಡೆದಿರುವ ವಿಶೇಷ ಪ್ರಶಸ್ತಿಗಳಿಂದ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...