ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಿಳ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೋವಿಡ್-19 ರ ಭೀತಿಯ ನಡುವೆಯೇ ಸರ್ಕಾರವು ತುಟ್ಟಿಭತ್ಯೆ ಮತ್ತು ಬೆಲೆ ಏರಿಕೆ ಪರಿಹಾರವನ್ನು ತಡೆಹಿಡಿದಿತ್ತು. ಜನವರಿ 1, 2020 ರಿಂದ ಜುಲೈ1, 2020 ಜನವರಿ 1, 2021ರ ತುಟ್ಟಿಭತ್ಯೆಗಳನ್ನು ಸರ್ಕಾರಿ ನೌಕರರಿಗೆ ನೀಡಿರಲಿಲ್ಲ.
ಕೋವಿಡ್ 19 ರ ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಡಿಎ ಮತ್ತು ಡಿಆರ್ ನ ಹೆಚ್ಚುವರಿ ಕಂತುಗಳನ್ನು ಸ್ಥಗಿತಗೊಳಿಸಿತ್ತು.
ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇಕಡಾ 3 ರಷ್ಟು ತುಟ್ಟಿಭತ್ಯೆ (Dearness allowance -DA) ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹೊಸ ಪ್ರಸ್ತಾವವು ಅನುಷ್ಠಾನಕ್ಕೆ ಬಂದ ನಂತರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯು ಶೇ.31 ಕ್ಕೆ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ.
ಈ ಕುರಿತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿಯನ್ನು ನೀಡಿದ್ದಾರೆ. 47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ್ಮಿ ಪಿಂಚಣಿದಾರರಿಗೆ ಅನುಕೂಲವಾಗುವಂತೆ ಕೇಂದ್ರ ಕ್ಯಾಬಿನೆಟ್ ತುಟ್ಟಿಭತ್ಯೆ ಮತ್ತು ಅನ್ಯಾಯ ಪರಿಹಾರವನ್ನು ಶೇಕಡಾ 3 ರಿಂದ 31 ಕ್ಕೆ ಹೆಚ್ಚಿಸಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ.3 ರಷ್ಟು ಹೆಚ್ಚಳ
Date: