ಸರ್ಕಾರಿ ಶಾಲೆಗಳಲ್ಲಿ ಸುಮಾರು 20 ಸಾವಿರ ಶಿಕ್ಷಕರ ಕೊರತೆ ಇದೆ. ಇದನ್ನು ನೀಗಿಸಲು ಶೀಘ್ರವೇ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರು ತಿಳಿಸಿದ್ದಾರೆ.
ಬೆಂಗಳೂರು ನಗರದ ಜೆ.ಪಿ.ನಗರ 1ನೇ ಹಂತದಲ್ಲಿ ನಿರ್ಮಿಸಲಾಗಿರುವ ಸಾರಕ್ಕಿ ಅಬ್ಬಯ್ಯ ರೆಡ್ಡಿ ಸ್ಮಾರಕ ಸರ್ಕಾರಿ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು
“ಕೋವಿಡ್ ಬಳಿಕ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚುತ್ತಿದೆ. ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನೂ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿತವರು ಯುಪಿಎಸ್ ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ತೋರಿಸಿದ್ದಾರೆ ಎಂದರು.
” ಪ್ರತಿ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ತಲಾ ಒಂದು ಮಾದರಿ ಶಾಲೆಗಳನ್ನು ನಿರ್ಮಿಸುವ ಗುರಿ ಇದೆ. ಕೋವಿಡ್ ಕಾರಣದಿಂದಾಗಿ ಶಿಕ್ಷಣ ಕ್ಷೇತ್ರಕ್ಕೂ ಸಂಕಷ್ಟ ಎದುರಾಗಿದೆ. ಅದರಿಂದ ಹೊರಬರಲು ” ನಮ್ಮ ಶಾಲೆ, ನಮ್ಮ ಕೊಡುಗೆ ” ಎಂಬ ವಿಶೇಷ ಕಾರ್ಯಕ್ರಮವನ್ನು ಜಾರಿಗೊಳಿಸಲು ಮುಂದಾಗಿದ್ದೇವೆ. ಇದಕ್ಕಾಗಿ ಹೊಸ ಆಪ್ ಕೂಡ ಪರಿಚಯಿಸಲಿದ್ದೇವೆ” ಎಂದು ತಿಳಿಸಿದರು.
ನಮ್ಮ ಶಾಲೆ, ನಮ್ಮ ಕೊಡುಗೆ : ಬಿ.ಸಿ.ನಾಗೇಶ್
Date: