ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಪ್ರಯುಕ್ತ ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
‘ನಮ್ಮ ನಾಡಿನ ಶ್ರೇಷ್ಠ ಮಹಿಳೆಯಾದ ಕಿತ್ತೂರು ರಾಣಿ ಚೆನ್ನಮ್ಮನ ತ್ಯಾಗ ಬಲಿದಾನವನ್ನು ನಾವು ಸದಾ ಸ್ಮರಿಸಲೇಬೇಕು. ಇವರ ಸ್ಮರಣಾರ್ಥ ಬೆಳಗಾವಿಯಿಂದ ಬೆಂಗಳೂರುವರೆಗೆ ಚೆನ್ನಮ್ಮ ಜ್ಯೋತಿ ಬೆಳಗಿಸಿದ್ದು ನನ್ನ ಸೌಭಾಗ್ಯ. ಪ್ರಸ್ತುತ ಚೆನ್ನಮ್ಮನ ಪುತ್ಥಳಿಯನ್ನು ಸ್ಥಾಪಿಸುವ ಹಿನ್ನೆಲೆಯಲ್ಲಿ ತಮ್ಮ ತಂದೆಯವರಾದ ಮಾಜಿ ಮುಖ್ಯಮಂತ್ರಿ ಎಸ್.ಆರ್ ಬೊಮ್ಮಾಯಿ ಅವರ ದೀರ್ಘ ಪ್ರಯತ್ನವನ್ನು ನೆನಪಿಗೆ ತಂದುಕೊಂಡರು. ಈಗ ತಮ್ಮ ಪಾಲಿಗೆ ರಾಣಿ ಚೆನ್ನಮ್ಮ ಜಯಂತಿ ಉತ್ಸವ ಮಹತ್ತರ ಕಾರ್ಯ ನನ್ನ ಪಾಲಿಗೆ ಬಂದಿದೆ ಎಂದರು.
ಕಿತ್ತೂರು ಪ್ರಾಧಿಕಾರಕ್ಕೆ ಈ ಹಿಂದೆ 8 ಕೋಟಿ ರೂ. ನೀಡಿ ಕೆಲಸ ಪ್ರಾರಂಭಿಸಲಾಗಿತ್ತು. ಈ ವರ್ಷ 50 ಕೋಟಿ ರೂಪಾಯಿಗಳ ಕ್ರಿಯಾಯೋಜನೆ ಅನುಮೋದನೆ ನೀಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ರಾಜುಗೌಡ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತು ಶಿವಾನಂದ ಮುತ್ತಣ್ಣನವರ್ ಉಪಸ್ಥಿತರಿದ್ದರು.