Sunday, February 9, 2025
Sunday, February 9, 2025

ವಿಶ್ವ ವಿಜ್ಞಾನಿ ಪಟ್ಟಿಗೆ ಡಾ.ಕುಮಾರಸ್ವಾಮಿ – ಡಾ. ಗಿರೀಶ್

Date:

ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಹೊರಡಿಸಿರುವ ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಕುಮಾರಸ್ವಾಮಿ ಮತ್ತು ಡಾ. ಗಿರೀಶ್ ಸ್ಥಾನ ಪಡೆದಿದ್ದಾರೆ.
ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ್ ಬೇಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್ ಅವರನ್ನೊಳಗೊಂಡ ಸಂಶೋಧನಾ ತಂಡವು ಸಿದ್ಧಪಡಿಸಿರುವ ವಿಶ್ವದ ಟಾಪ್ ಶೇಕಡಾ 2 ವಿಜ್ಞಾನಿಗಳ ಅಂಕಿಅಂಶಗಳನ್ನು ಅಕ್ಟೋಬರ್ 19ರಂದು ಬಿಡುಗಡೆಯಾಗಿದ್ದು ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ ಎಂದು ಕುವೆಂಪು ವಿವಿ ತಿಳಿಸಿದೆ.

ಸಂಶೋಧನಾ ತಂಡವು ವಿಶ್ವದ ಸಂಶೋಧಕರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಾಗತಿಕವಾಗಿ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವನ್ನು ಪ್ರಕಟಿಸಿದ್ದಾರೆ. ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 176 ಉಪವಿಜ್ಞಾನ ವಿಷಯಗಳನ್ನು ವಿಂಗಡಿಸಿ ರಚಿಸಿರುವುದಾಗಿದ್ದು, ವೃತ್ತಿಜೀವಮಾನ ಸಾಧಕರು ಮತ್ತು 2021ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳನ್ನು ಒಳಗೊಂಡಿದೆ.

2021ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 54804ನೇ ಸ್ಥಾನವನ್ನು ಪಡೆದಿರುವ ವಿವಿಯ ಗಣಿತವಿಜ್ಞಾನ ಸಹಪ್ರಾಧ್ಯಾಪಕ ಡಾ. ಬಿ.ಜೆ. ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್‌ ವಿಷಯಗಳ ಕುರಿತ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಇನ್ನು ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಬಿ. ಇ. ಕುಮಾರಸ್ವಾಮಿ 165713ನೇ ಸ್ಥಾನದಲ್ಲಿದ್ದಾರೆ.

ಈ ವರ್ಷದ ಪಟ್ಟಿಯಲ್ಲಿ ಭಾರತದ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸುಮಾರು 2042 ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ 1900 ವಿಜ್ಞಾನಿಗಳು ಸ್ಥಾನ ಪಡೆದಿದ್ದರು. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (IISc.) 114 ವಿಜ್ಞಾನಿಗಳು ಈ ಪಟ್ಟಿಯಲ್ಲಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ವಿವಿಯ ಸಂಶೋಧನಾ ಸಾಧನೆಗೆ ಪೂರಕವಾದ ಕಾರ್ಯ ಮಾಡುತ್ತಿರುವ ಈ ಇಬ್ಬರು ಪ್ರಾಧ್ಯಾಪಕರ ಸಾಧನೆಯು ಕುವೆಂಪು ವಿವಿಗೆ ಹೆಮ್ಮೆ ತಂದಿದೆ ಎಂದು ವಿವಿಯ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಮತ್ತು ಕುಲಸಚಿವೆ ಜಿ. ಅನುರಾಧ ಅವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕೆಲವು ಮೆಲುಕುಗಳು

ಲೇ: ಗೋಪಾಲ್ ಯಡಗೆರೆ.ಹಿರಿಯ ವರದಿಗಾರರು. ಕನ್ನಡಪ್ರಭ. ಶಿವಮೊಗ್ಗ Klive Special Article ...

Warrant Officer Manjunath ಸ್ಕೈ ಡೈವಿಂಗ್ ಸಂದರ್ಭದಲ್ಲಿ‌ ಪ್ಯಾರಾಚ್ಯೂಟ್ ತೆರೆಯದೇ ಏರ್ ಫೋರ್ಸ್ ಅಧಿಕಾರಿ ಮಂಜುನಾಥ್ ಮರಣ

Warrant Officer Manjunath ಸ್ಕೈ ಡೈವಿಂಗ್ ವೇಳೆ ಪ್ಯಾರಚ್ಯೂಟ್ ತೆರೆಯದೆ ಏರ್ಫೋರ್ಸ್...

Guarantee scheme ರಾಜ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರ ಮೆಚ್ಚುಗೆ

Guarantee scheme ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು...

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ‌ಕ್ಕೆ ಒತ್ತು‌ ನೀಡಲಾಗುವುದು- ಗುರುದತ್ತ ಹೆಗಡೆ

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿ ದೀಪ,...