ಸೊರಬ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಜನರ ಸಮಸ್ಯೆಗೆ ಧ್ವನಿಯಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರೆ.
ಸೊರಬದ ಬಂಗಾರ ಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 88ನೇ ಜನ್ಮದಿನದ ಅಂಗವಾಗಿ ಅವರ ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸಿ ಮಾತನಾಡುತ್ತಿದ್ದರು.
ಗ್ರಾಮೀಣ ಕೃಪಾಂಕ, ರೈತರ ಪಂಪಸೆಟ್‍ಗಳಿಗೆ ಉಚಿತ ವಿದ್ಯುತ್ ಸೇರಿದಂತೆ ತಳ ಸಮುದಾಯದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದರು. ರೈತರಿಗೆ ಭೂಮಿಯ ಹಕ್ಕನ್ನು ಕೊಡುವುದು ಬಂಗಾರಪ್ಪ ಅವರ ಮೊದಲ ಧ್ಯೇಯವಾಗಿತ್ತು ಎಂದು ಮಧು ಬಂಗಾರಪ್ಪ ನುಡಿದಿದ್ದಾರೆ.
ಜಯಂತಿ ಅಂಗವಾಗಿ ಏರ್ಪಡಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಪಕ್ಷಾತೀತವಾಗಿ ಎಲ್ಲರೂ ಪಾಲ್ಗೊಂಡಿದ್ದಾರೆ ಇದು ಬಂಗಾರಪ್ಪ ಅವರ ಬಗೆಗಿನ ಎಲ್ಲರ ಅಭಿಮಾನವನ್ನು ತೋರಿಸುತ್ತದೆ ಎಂದರು.