ಭಾರತದ ಟಿ ಟ್ವೆಂಟಿ ಕ್ರಿಕೆಟ್ ತಂಡಕ್ಕೆ ನಾಯಕರನ್ನಾಗಿ ‘ಹಿಟ್ ಮ್ಯಾನ್’ ಖ್ಯಾತಿಯ ಬ್ಯಾಟ್ಸ್ ಮ್ಯಾನ್ ರೋಹಿತ್ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ಭಾರತ ಮತ್ತು ನ್ಯೂಜಿಲ್ಯಾಂಡ್ ಟಿ20 ಸರಣಿಯು ಇದೇ ತಿಂಗಳ 17ರಂದು ನಡೆಯಲಿದ್ದು, ಸರಣಿಯಲ್ಲಿ ಆಡುವ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ.
ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ವಿಶ್ವಕಪ್ ಟೂರ್ನಿ ನಂತರ ವಿರಾಟ್ ಟಿ20 ತಂಡದ ನಾಯಕತ್ವ ಬಿಟ್ಟುಕೊಟ್ಟಿದ್ದಾರೆ. ವೇಗಿ ಜಸ್ ಪ್ರೀತ್ ಬೂಮ್ರಾ ಮತ್ತು ಸ್ಪಿನ್ನರ್ ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿದೆ ಹಾಗೂ ಆಲ್-ರೌಂಡರ್ ಹಾರ್ದಿಕ್ ಪಾಂಡೆ ಅವರನ್ನು ತಂಡದಿಂದ ಕೈ ಬಿಡಲಾಗಿದ್ದು, ಕರ್ನಾಟಕದ ಕೆ ಎಲ್ ರಾಹುಲ್ ಅವರನ್ನು ತಂಡದ ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಕಿವೀಸ್ ವಿರುದ್ಧದ ಟಿ-20 ಸರಣಿಯಲ್ಲಿ ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಋತುರಾಜ್ ಗಾಯಕವಾಡ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವೆಂಕಟೇಶ ಅಯ್ಯರ್, ಯಜುವೇಂದ್ರ ಚಾಹಲ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ಆವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್ ಮತ್ತು ಮೊಹಮ್ಮದ್ ಸಿರಾಜ್ ಇವರುಗಳನ್ನ ಆಯ್ಕೆ ಮಾಡಲಾಗಿದೆ.