Friday, December 12, 2025
Friday, December 12, 2025

ಸಾರಿಗೆ ಬಸ್ ನಲ್ಲಿ ಮೊಬೈಲ್ ಕಿರಿಕ್, ಬ್ರೇಕ್

Date:

ಇದು ಆಧುನಿಕ ಯುಗ. ಎಲ್ಲೆಂದರಲ್ಲಿ ಸ್ಮಾರ್ಟ್ ಫೋನ್ ಗಳ ಹಾವಳಿ. ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ಫೋನ್ ಗಳ ಬಳಕೆ ಸಾರ್ವಜನಿಕರಿಗೆ ಕಿರಿಕಿರಿಯಾಗಿ ಪರಿಣಮಿಸಿದೆ. ಇದರಿಂದಾಗಿ ಶಬ್ದ ಮಾಲಿನ್ಯವು ಹೆಚ್ಚಾಗುತ್ತಿದೆ. ನಾವು ಎಷ್ಟೇ ಪ್ರಯತ್ನಿಸಿದರೂ ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ಫೋನ್ ಗಳ ಬಳಕೆಯನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ.
ಆದರೆ ಈಗ ಈ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗಾದರೂ ಕಡಿಮೆ ಗೊಳಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯು ಮುಂದಾಗಿದೆ.
ಬಸ್ಸಿನಲ್ಲಿ ಸಹಪ್ರಯಾಣಿಕರಿಗೆ ತೊಂದರೆಯಾಗುವಂತೆ ಮೊಬೈಲ್ ನಲ್ಲಿ ಜೋರಾಗಿ ಹಾಡು ಹಾಕುವುದು, ಬೇರೆಯವರಿಗೆ ಕಿರಿಕಿರಿಯಾಗುವಂತೆ ಸಿನಿಮಾ ನೋಡುವುದು, ಗಟ್ಟಿಯಾಗಿ ಮಾತನಾಡುವುದು ಸರ್ವೇಸಾಮಾನ್ಯವಾಗಿಬಿಟ್ಟಿದೆ. ಈ ರಗಳೆಗಳನ್ನು ತಡೆಯಲು ಸಾರಿಗೆ ಇಲಾಖೆಯು ಮೊದಲ ಪ್ರಯತ್ನಕ್ಕೆ ಸಜ್ಜಾಗಿದೆ.
ಬಸ್ ನಲ್ಲಿ ಪ್ರಯಾಣಿಕರಿಗೆ ಮೊಬೈಲ್ ನಿಂದ ಆಗುವ ತಲೆನೋವು ತಪ್ಪಿಸಲು ಹಾಗೂ ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕಲು ಹೈಕೋರ್ಟ್ ಸೂಚನೆ ಮೇರೆಗೆ ಸಾರಿಗೆ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ.
ಕರ್ನಾಟಕ ಮೋಟಾರು ವಾಹನ ನಿಯಮಗಳು -1989, ನಿಯಮ 94(1) (ವಿ) ಅನ್ನು ಉಲ್ಲಂಘಿಸಿ ನಿಗಮದ ಬಸ್ಸುಗಳಲ್ಲಿ ಮೊಬೈಲ್ ಮೂಲಕ ಜೋರು ಶಬ್ದ ಮಾಡುವುದನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ಪ್ರಯಾಣಿಕರಿಗೆ ಕರ್ತವ್ಯನಿರತ ಸಿಬ್ಬಂದಿ ಸೂಕ್ತ ತಿಳಿವಳಿಕೆ ನೀಡಬೇಕು. ಹೆಚ್ಚಾಗಿ ಶಬ್ಧ ಬರುವಂತೆ, ಪ್ರಯಾಣಿಕರಿಗೆ ತೊಂದರೆಯಾಗುವಂತೆ ಮೊಬೈಲ್ ಬಳಸುತ್ತಿದ್ದರೆ, ಬಳಸದಂತೆ ವಿನಂತಿಸಿಕೊಳ್ಳಬೇಕು. ಮನವಿಗೆ ಸ್ಪಂದಿಸದಿದ್ದರೆ ನಿಯಮಾನುಸಾರ ಚಾಲಕ ಅಥವಾ ನಿರ್ವಾಹಕ ಬಸ್ಸಿನಿಂದ ಆ ಪ್ರಯಾಣಿಕನನ್ನು ಕೆಳಗಿಳಿಸಬೇಕು. ಆತ ಕೆಳಕ್ಕೆ ಇಳಿಯುವವರೆಗೂ ಬಸ್ಸನ್ನು ಅಲ್ಲೇ ನಿಲ್ಲಿಸುವುದು ಹಾಗೂ ಕೆಳಕ್ಕಿಳಿದ ಪ್ರಯಾಣಿಕರಿಗೆ ಬಸ್ ದರವನ್ನು ಹಿಂದಿರುಗಿಸಬಾರದು ಎಂದು ಆದೇಶ ಸ್ಪಷ್ಟಪಡಿಸಲಾಗಿದೆ.
ಸಾರಿಗೆ ಇಲಾಖೆಯ ಈ ಹೊಸ ಪ್ರಯತ್ನವು ಜನಸಾಮಾನ್ಯರಿಗೆ ಮಾತ್ರವಲ್ಲದೇ ಪರಿಸರಕ್ಕೂ ಅನುಕೂಲಕರವಾಗಲಿದೆ.
ಈ ಹಿಂದೆ ಕ್ಯಾಸೆಟ್ ಹಾಕಿ ಬಸ್ ನವರೇ ತೊಂದರೆ ಕೊಡುತ್ತಿದ್ದರು. ಅದು ನಿಂತಮೇಲೆ ಪ್ರಯಾಣಿಕರಿಂದ ಈ ಹೊಸ ಕಿರಿಕಿರಿ ಶುರುವಾಗಿತ್ತು. ಈಗ ಎರಡಕ್ಕೂ ಬ್ರೇಕ್!…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Human Rights Commission ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್

Human Rights Commission ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು,...

ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ

ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ...

Sahyadri Narayana Hospital ವೈದ್ಯರ ಚಿಕಿತ್ಸೆಯಿಂದ ತಾಯಿಗೆ ದೃಷ್ಟಿ, ಅವಧಿಪೂರ್ವ ಮಗುವಿಗೆ ಜೀವದಾನ

Sahyadri Narayana Hospital 25 ವರ್ಷದ ಯುವತಿ ಗಂಡನ ಜೊತೆ ಸಂತೋಷವಾಗಿದ್ದಳು....

Akashavani Bhadravati ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳ ಪ್ರಸಾರ

Akashavani Bhadravati ಡಿ 15 ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿದಿನ...