ಕೃಷಿ ವಿಚಕ್ಷಣಾ ದಳದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾನ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ಮಾತನಾಡಿ ರಾಜ್ಯದಲ್ಲಿ ರೈತರಿಗೆ ಯಾವುದೇ ರೀತಿಯ ಕಳಪೆಯಾದ ಕೃಷಿ ಪರಿಕರಗಳು, ರಸಗೊಬ್ಬರ, ಕೀಟನಾಶಕಗಳು ಸರಬರಾಜಿಗಾದಂತೆ ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಜಾಗೃತಿಗೊಳಿಸಲು ತಿಳಿಸಿದರು.
ಕಳಪೆ ರಸಗೊಬ್ಬರ, ಕೀಟನಾಶಕಗಳು ತಯಾರಾಗದಂತೆ ಅಕ್ರಮ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟವಾಗದಂತೆ ತಳಮಟ್ಟದಲ್ಲಿ ಅವುಗಳನ್ನು ಬುಡಸಹಿತ ಕಿತ್ತು ಹಾಕಬೇಕು. ರೈತರಿಗೆ ಅನ್ಯಾಯ ವಾಗುವಂತಹ ಇಂತಹ ಕುಕೃತ್ಯದಲ್ಲಿ ಯಾರೇ ಅಧಿಕಾರಿಗಳಾಗಲಿ, ಇನ್ಯಾರೇ ಆಗಲಿ ಶಾಮಿಲ್ ಆಗದಂತೆ ನೋಡಿಕೊಂಡು ತಪ್ಪಿತಸ್ಥರ ವಿರುದ್ಧ ರ್ನಿದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಸಚಿವರು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆಯ “ಟೋಲ್ ಫ್ರೀ- ಸಹಾಯವಾಣಿ” ದೂರವಾಣಿ ಸಂಖ್ಯೆಯನ್ನು ಜಾಗೃತಿ ಕೋಶಕ್ಕೂ ವಿಸ್ತರಿಸುವಂತೆ ಈ ಸಭೆಯಲ್ಲಿ ಸಚಿವರು ಸೂಚಿಸಿದರು.
ಈ ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.