ಕಳೆದ ಒಂದು ವರ್ಷದೊಳಗಿನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಪೊಲೀಸರು 231 ಪ್ರಕರಣಗಳನ್ನು ಪತ್ತೆಹಚ್ಚಿ 3.3.ರೂ ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 518 ಸ್ವತ್ತು ಕಳುವು ಪ್ರಕರಣಗಳು ದಾಖಲಾಗಿತು. ಅದರಲ್ಲಿ 231 ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬರೋಬ್ಬರಿ 3.3 ಕೋಟಿ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ಸಂಬಂಧಪಟ್ಟ ವಾರಸುದಾರರಿಗೆ ಹಿಂತಿರುಗಿಸಿದರು.
2ಕೆಜಿ 879 ಗ್ರಾಂ ಬಂಗಾರದ ಆಭರಣಗಳು, 14 ಕೆಜಿ 394 ಗ್ರಾಂ ಬೆಳ್ಳಿ ಸಾಮಗ್ರಿಗಳು, 73 ವಾಹನಗಳು, 27 ಮೊಬೈಲ್ ಫೋನ್ ಗಳು, 6 ಜಾನುವಾರುಗಳು, 39 ಕ್ವಿಂಟಲ್ ಅಡಿಕೆ, ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳೆದುಕೊಂಡಿದ್ದ ವಾರಸುದಾರರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ ಲಕ್ಷ್ಮೀಪ್ರಸಾದ್ ಅವರು ಹಿಂತಿರುಗಿಸಿದರು.
ಶಿವಮೊಗ್ಗ ಜಿಲ್ಲಾ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.