ಈಗ ಜಾರಿಯಲ್ಲಿರುವ ಮೂರು ಕೃಷಿ ಕಾಯ್ದೆಗಳನ್ನು ಸರ್ಕಾರವು ವಾಪಸ್ ಪಡೆಯುವ ಪ್ರಕ್ರಿಯೆ ಆರಂಭ ಮಾಡಲಿದೆ. ಬರುವ ಸಂಸತ್ತಿನ ಅಧಿವೇಶನದಲ್ಲಿ, ಅವುಗಳನ್ನು ಸಂವಿಧಾನಾತ್ಮಕ ಕ್ರಮಗಳ ಮೂಲಕ ವಜಾ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕಳೆದ ಒಂದು ವರ್ಷದಿಂದ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ್ ಕೃಷಿಕರು ಈ ಮೂರು ಕೃಷಿ ಕಾಯ್ದೆ ರದ್ದುಗೊಳಿಸಲು ಒತ್ತಾಯಿಸಿ, ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದನ್ನು ಇಲ್ಲಿ ಸ್ಮರಿಸಬಹುದು.
ಪ್ರಧಾನಿ ಮೋದಿಜಿ ಅವರು ಪ್ರತಿಭಟನಾನಿರತ ಕೃಷಿಕರು ತಮ್ಮ ಮನೆಗಳಿಗೆ ಹಿಂದಿರುಗಬೇಕು. ಮತ್ತು ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯಲಾಗುವುದು ಎಂದು ತಿಳಿಸಿದ್ದಾರೆ. ಅವರು ತಮ್ಮ ಸಂದೇಶದಲ್ಲಿ ಈ ಕೃಷಿ ಕಾಯ್ದೆಗಳ ಗುರಿಯು ಕೃಷಿಕರನ್ನು ಬಲಪಡಿಸುವುದೇ ಆಗಿದೆ. ಆದರೆ ಉತ್ತಮ ಪ್ರಯತ್ನ ಮಾಡಿದರು ಕೂಡ, ಕೆಲವು ವರ್ಗದ ಕೃಷಿಕರನ್ನು ಮನವರಿಕೆ ಮಾಡಿಕೊಡಲಾಗಲಿಲ್ಲ.
“ನಾನು, ಮತ್ತಷ್ಟು ಕಠಿಣವಾಗಿ ಶ್ರಮಿಸುತ್ತೇನೆ. ನಿಮ್ಮ ಕನಸುಗಳನ್ನು ,ದೇಶದ ಕನಸುಗಳನ್ನು ಈಡೇರಿಸಲು ಸಾಧ್ಯ ಮಾಡುತ್ತೇನೆ” ಎಂದು ಭರವಸೆ ನೀಡಿದ್ದಾರೆ.