ಬಂಗಾಳಕೊಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಕೆಲವೆಡೆ ಭಾರಿ ಪ್ರಮಾಣದ ಮಳೆಯಾಗುತ್ತದೆ. ಇನ್ನು ಒಂದು ವಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ನಿರಂತರ ವಾಯುಭಾರ ಕುಸಿತ ಕ್ಕೆ ಕೇವಲ ‘ಲಾ ನಿನಾ ಚಂಡಮಾರುತ ‘ಒಂದೇ ಕಾರಣವಲ್ಲ. ಜಾಗತಿಕ ತಾಪಮಾನವು ಕಾರಣವಾಗಿದೆ. ಇದು ಕಡಿಮೆ ಮಳೆ ಬೀಳುವ ಪ್ರದೇಶದಲ್ಲಿ ಹೆಚ್ಚು ಮಳೆ. ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಕಡಿಮೆ ಮಳೆ ತರುತ್ತದೆ. ಇದರಿಂದ ಪ್ರಕೃತಿ ವಿಕೋಪಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಸಮಾಲೋಚಕ ಡಾ. ಜಿ. ಎಸ್. ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ನವೆಂಬರ್ ತಿಂಗಳಲ್ಲಿ ಸುರಿಯುವ ವಾಡಿಕೆ ಮಳೆಗಿಂತ ಶೇ.62 ರಷ್ಟು ಅಧಿಕವಾಗಿದೆ.
ಲಾ ನಿನಾ ಚಂಡಮಾರುತದ ಪರಿಣಾಮದಿಂದ ವಾಯುಭಾರಕುಸಿತ ಹೆಚ್ಚಾಗುತ್ತಿವೆ. ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ನಿರಂತರವಾಗಿ ಮಳೆಯಾಗುತ್ತಿದೆ. ಮತ್ತೆ ಕುಸಿತ ಮುಂದುವರಿಯುವ ಸಾಧ್ಯತೆಯಿದೆ. ಇದರಿಂದ ಮಳೆ ನಿಲ್ಲುವ ಸಾಧ್ಯತೆ ಕಡಿಮೆ ಇದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಶಾಲೆಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಮಳೆ ರಭಸಕ್ಕೆ ಕೆಲವು ಹಳೆಯ ಕಟ್ಟಡಗಳು ನೆಲಕ್ಕುರುಳಿವೆ. ಬೆಳೆ ಹಾನಿ ಉಂಟಾಗಿದೆ. ಅನೇಕ ಸೇತುವೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
ಸತತವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಇಂದು 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ತುಮಕೂರು, ಬೆಳಗಾವಿ, ದಾರವಾಡ ಮುಂತಾದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.