ಅಂತರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆ’ ಅಂಗವಾಗಿ ಗ್ರಾಮಗಳ ಸ್ತ್ರೀಶಕ್ತಿ ಸಂಘ ಗಳಿಂದ ಹಿಡಿದು ಬೃಹತ್ ಮಟ್ಟದ ಉದ್ಯಮಗಳಿಗಾಗಿಯೇ ಉತ್ತಮ ಆರ್ಥಿಕ ವ್ಯವಸ್ಥೆ ಕಲ್ಪಿಸಲು ಮಹಿಳೆಯರಿಗೆ ಪ್ರತ್ಯೇಕ ಆರ್ಥಿಕ ಸಂಸ್ಥೆ ರಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಂತಹ ‘ಒಗ್ಗಟ್ಟಾಗಿ ಬೆಳೆಯೋಣ’ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಂಧ ಮಹಿಳೆಯರಿಗೆ ವಿಶೇಷ ಕಾರ್ಯಕ್ರಮವನ್ನು ಒಂದುವಾರದೊಳಗೆ ರೂಪಿಸಿ ಮಹಿಳೆಯರು ಉದ್ಯೋಗ ಹೊಂದುವಂತೆ ವಿಶೇಷ ಯೋಜನೆ ಜಾರಿ ಮಾಡಲಾಗುವುದು’ ಎಂದು ಸಿಎಂ ತಿಳಿಸಿದರು.
2019ರ ಕೈಗಾರಿಕಾ ನೀತಿ ಒಳಗೊಂಡಿದ್ದ ಮಹಿಳಾ ಉದ್ಯಮಿಗಳಿಗೆ ನೀಡುವ ಪ್ರೋತ್ಸಾಹಕಗಳ ಅಧ್ಯಾಯನವನ್ನು 2020-25ರ ನೀತಿಯಲ್ಲಿ ಸೇರಿಸಲಾಗುವುದು. ಈಗಾಗಲೇ ಮಹಿಳಾ ಉದ್ಯಮಿಗಳಿಗೆ ನೀಡುವ ನೀಡುವ ಅನುದಾನದಲ್ಲಿ ರಿಯಾಯಿತಿ ನೀಡಲಾಗಿದೆ. ಜಮೀನು ಖರೀದಿಗೆ ರಿಯಾಯಿತಿ ಒದಗಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.