ರಾಜ್ಯದಲ್ಲಿ ಎರಡು ವಾರಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೆಆರ್ ಎಸ್ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ.ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾದ ಹಿನ್ನೆಲೆ 18 ಸಾವಿರ ಕ್ಯುಸೆಕ್ ನೀರನ್ನು ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಇದರಿಂದ ಕಾವೇರಿ ನದಿಯು ಮೈದುಂಬಿ ಹರಿಯುತ್ತಿದೆ. ಕಾವೇರಿ ನದಿಯಲ್ಲಿ ನೀರಿನ ಸೆಳೆತ ಹೆಚ್ಚಾಗಿರುವುದರಿಂದ ಶ್ರೀರಂಗಪಟ್ಟಣ, ನಿಮಿಷಾಂಬ ದೇವಾಲಯದ ಬಳಿ ನದಿಗೆ ಯಾರು ಇಳಿಯದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ ಹಾಗೂ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಕೆ ಆರ್ ಎಸ್ ಜಲಾಶಯಕ್ಕೆ 18 ಸಾವಿರ ಕ್ಯುಸೆಕ್ಸ್ ನೀರು ಹರಿದು ಬಂದಿದ್ದು ಜಲಾಶಯದ ನೀರಿನ ಗರಿಷ್ಠ ನೀರಿನ ಮಟ್ಟ 124.80 ಅಡಿ ಹೆಚ್ಚಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದೇ ದಿನದ ಅವಧಿಯಲ್ಲಿ 47.16 ಟಿಎಂಸಿ ಅಡಿಗಳಷ್ಟು ನೀರಿತ್ತು. ಈ ಬಾರಿ ಜಲಾಶಯದಲ್ಲಿ ಸದ್ಯ 49.45 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ರಾಮಮೂರ್ತಿ ತಿಳಿಸಿದರು.