ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಅನೇಕ ಬೆಳೆ ಹಾನಿಯಾಗಿದೆ. ಮಳೆಯಿಂದ ಉಂಟಾದ ಹಾನಿಯ ಪರಿಹಾರ ಕಾರ್ಯಕ್ಕಾಗಿ ತಕ್ಷಣವೇ 130 ಕೋಟಿ ಬಿಡುಗಡೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
ಭ ತ್ತ, ಜೋಳ ಸೇರಿದಂತೆ ವಿವಿಧ ಬೆಳೆಗಳ ಹಾನಿಯ ಬಗ್ಗೆ ಪ್ರಾಥಮಿಕ ಮಾಹಿತಿ ಇದ್ದು, ನಿಖರವಾದ ಮಾಹಿತಿಯನ್ನು ಪ್ರತಿ ಜಿಲ್ಲೆಯಿಂದ ಪಡೆಯುತ್ತಿದ್ದೇನೆ. ಸಮೀಕ್ಷೆ ನಂತರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.
ಕಳೆದೆರಡು ತಿಂಗಳಿನಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾದ ಹಾನಿಯ ಉಂಟಾದ ಹಾನಿಯ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳ ಸಂವಾದ ನಡೆಸಿದರು.
ಮಳೆಯ ಪರಿಣಾಮವಾಗಿ ಹಾನಿಗೊಳಗಾದ ಮನೆಗಳಿಗೆ ತಕ್ಷಣವೇ 10 ಸಾವಿರ ಪರಿಹಾರ ನೀಡಬೇಕು. ಸಾಂತ್ವನ ಕೇಂದ್ರಗಳಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಬೇಕು. ಪರಿಹಾರ ಕಾರ್ಯಕ್ಕೆ ಈ ಹಿಂದಿನ ವರ್ಷಗಳಲ್ಲಿ ಹೊರತುಪಡಿಸಿ ರುವ ಮಾರ್ಗಸೂಚಿಗಳನ್ನು ಪಾಲಿಸಲು ಅವರು ಸಲಹೆ ನೀಡಿದರು ಎಂದು ಮೂಲಗಳು ತಿಳಿಸುತ್ತವೆ.
ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಗಳು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಬೇಕು. ಬೆಳೆ ಮತ್ತು ಇತರ ಹಾನಿಯ ಬಗ್ಗೆ ಮಾಡಿಟ್ಟುಕೊಳ್ಳಬೇಕು. ಕೇಂದ್ರ ತಂಡ ಬರುವುದು ಇನ್ನೂ ಒಂದು ತಿಂಗಳಾಗಬಹುದು. ಆ ಸಂದರ್ಭದಲ್ಲಿ ಬೆಳೆಯೇ ಇರುವುದಿಲ್ಲ. ಅದಕ್ಕೋಸ್ಕರ ಹಾನಿಯ ಕುರಿತ ವಿಡಿಯೋ ಮಾಡಬಹುದು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಆರ್ .ಅಶೋಕ್ ಅವರು ಸಲಹೆ ನೀಡಿದರು.
ಸಭೆಯಲ್ಲಿ ವಸತಿ ಸಚಿವ ವಿ. ಸೋಮಣ್ಣ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ತೋಟಗಾರಿಕಾ ಸಚಿವ ಮುನಿರತ್ನ, ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.