Sunday, March 23, 2025
Sunday, March 23, 2025

ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಿ- ಸೆಲ್ವ ಕುಮಾರ್

Date:

ಶಿವಮೊಗ್ಗದ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ರೈತರ ಆತ್ಮಹತ್ಯೆ, ಆಕಸ್ಮಿಕ ಸಾವು, ಹಾವು ಕಡಿತ ಹೀಗೆ ಮುಂತಾದ ಪ್ರಕರಣಗಳಲ್ಲಿ ಸಂತ್ರಸ್ಥರ ಕುಟುಂಬಕ್ಕೆ ತಕ್ಷಣವೇ ಪರಿಹಾರ ನೀಡಬೇಕು. ಇದಕ್ಕೆ ಜಿಲ್ಲಾಡಳಿತ ಅನುದಾನ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಸೂಚಿಸಿದ್ದಾರೆ.

ಸಹಾಯಧನವನ್ನು ನೀಡಲು ಸರ್ಕಾರ ಅನುದಾನ ಬಿಡುಗಡೆ ಮಾಡುವವರೆಗೂ ಮಂದಗತಿಯಲ್ಲಿ ಕಾರ್ಯ ನಿರ್ವಹಿಸಬಾರದು. ಜಿಲ್ಲಾಡಳಿತದ ಅನುದಾನವನ್ನು ಬಳಸಿಕೊಂಡು ಶೀಘ್ರದಲ್ಲಿ ಪರಿಹಾರಧನ ವಿತರಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಸಮಯದಲ್ಲಿ ಸುರಿಯುತ್ತಿರುವ ಮಳೆಯಿಂದ ಆಗುತ್ತಿರುವ ಬೆಳೆ, ಜೀವ ಹಾನಿ ಮಾಹಿತಿ ಪಡೆದು ತಕ್ಷಣ ವರದಿ ಸಲ್ಲಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಅದರ ಗಡವು ಮೀರುವ ಒಳಗೆ ಪೂರ್ಣಗೊಳಿಸಬೇಕು.

ವಸತಿ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳು ಕೆಲವು ವರ್ಷಗಳಿಂದ ಮನೆ ಕಟ್ಟಿಕೊಂಡಿಲ್ಲ. ಕಳೆದ ಬಾರಿಯ ಮಳೆಯ ಪರಿಣಾಮವಾಗಿ ಅನೇಕ ಮನೆಗಳು ನೆಲ ಸಮಾಧಿಯಾಗಿವೆ. ನಿರಾಶ್ರಿತರಿಗೆ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆದರೆ ಹಲವು ಫಲಾನುಭವಿಗಳು ಮನೆಗಳನ್ನು ನಿರ್ಮಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಬೇಕು. ಫಲಾನುಭವಿಗಳು ಈಗಾಗಲೇ ಮನೆ ನಿರ್ಮಿಸಿಕೊಂಡಿದ್ದಾರೆ. ಅಂತಹ ಫಲಾನುಭವಿಗಳಿಗೆ ನಿಯಮಾನುಸಾರ ಅನುದಾನ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಳ್ಳಿ ಸಭೆಯಲ್ಲಿ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Thawar Chand Gehlot ರಾಜಭವನದಲ್ಲಿ ಸಂಭ್ರಮಿಸಿದ “ಚಂದನ” ದ ಚೈತ್ರಾಂಜಲಿ, ಯುಗಾದಿ ಶುಭಾಶಯ ಕೋರಿದ ರಾಜ್ಯಪಾಲ‌ ಗೆಹ್ಲೋಟ್

Thawar Chand Gehlot ಬೆಂಗಳೂರು 22.03.2025: ಹಿಂದುಗಳ ಹೊಸ ವರ್ಷವೆಂದೇ ಕರೆಯಲ್ಪಡುವ...

PM Yoga Awards ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ...

PM Yoga Awards 2025 ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards 2025 ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ...