ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶ ಹಾಗೂ ಜೀವ ಹಾನಿಯಾಗಿದೆ.
ಧಾರವಾಡ, ಹಾವೇರಿ, ವಿಜಯನಗರ, ಉತ್ತರ ಕನ್ನಡ ಇನ್ನು ಹಲವಾರು ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಈರುಳ್ಳಿ, ಮೆಣಸಿನಕಾಯಿ, ಭತ್ತ ಬೆಳೆಗಳಿಗೆ ಹಾನಿಯಾಗಿವೆ.
ಹಾವೇರಿ ಜಿಲ್ಲೆಯಲ್ಲಿ 567 ಮನೆಗಳು, ವಿಜಯನಗರ ಜಿಲ್ಲೆಯಲ್ಲಿ 65 ಮನೆಗಳು ಹಾನಿಯಾಗಿವೆ. ಹುಬ್ಬಳ್ಳಿಯಲ್ಲಿ 9 ಮನೆಗಳು ಕುಸಿದಿದೆ. ಒಟ್ಟು 1331 ಹೆಕ್ಟೇರ್ ಬೆಳೆ ಹಾಳಾಗಿದೆ.
ನವೆಂಬರ್ 23ರ ವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದಲ್ಲಿ ರಾತ್ರಿ ಮನೆ ಕುಸಿದು ಪ್ರಭಾಕರ್ ಎಂಬಾತ ಮೃತಪಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ನಾಯಕನಹಟ್ಟಿಯಲ್ಲಿ ರಾತ್ರಿ ಇಡೀ ಸುರಿದ ಮಳೆಯಿಂದಾಗಿ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹಂಪಿ ಸ್ನಾನಘಟ್ಟ, ಚಕ್ರತೀರ್ಥ, ವಿಜಯನಗರ ಕಾಲದ ಕಾಲುಸೇತುವೆ, ಪುರಂದರ ಮಂಟಪ ಸ್ಮಾರಕಗಳು ಜಲಾವೃತಗೊಂಡಿವೆ.1633 ಅಡಿ ಸಾಮರ್ಥ್ಯದ ತುಂಗಭದ್ರಾ ಜಲಾಶಯ ಪೂರ್ಣ ವಾಗಿ ಭರ್ತಿಯಾಗಿದ್ದು,ನದಿಗೆ ನೀರು ಹರಿಸಲಾಗುತ್ತಿದೆ. ಒಳಹರಿವಿನ ಪ್ರಮಾಣ 50ಸಾವಿರ ಕ್ಯೂಸೆಕ್ ಇದೆ. ಅಷ್ಟೇ ಪ್ರಮಾಣದ ನೀರು ನದಿಗೆ ಹರಿಸಲಾಗುತ್ತಿದೆ. 12 ಕ್ರಸ್ಟ್ ಗೇಟ್ ಗಳಿಂದ ನೀರು ಹರಿಸಲಾಗುತ್ತಿದೆ. ನದಿಯಂಚಿನಲ್ಲಿ ವಾಸಿಸುತ್ತಿರುವ ಜನರಿಗೆ ಎಚ್ಚರಿಕೆ ಯಲ್ಲಿ ಇರುವಂತೆ ತಿಳಿಸಲಾಗಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.