ಶಿವಮೊಗ್ಗದ ವಿನೋಬನಗರ ಶಿವಾಲಯ ಸಭಾಂಗಣದಲ್ಲಿ, ನಾಡ ನಮನ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರತಿಮನೆಯಲ್ಲೂ ದೇಶಭಕ್ತಿ ಗೀತೆ, ರಾಷ್ಟ್ರಾಭಿಮಾನ ಮೊಳಗಬೇಕು.
ಹೆಣ್ಣುಮಕ್ಕಳು ಸದಾ ತಮ್ಮ ಕುಟುಂಬದ ಜವಾಬ್ದಾರಿ ಹೊತ್ತು, ಮನೆಯೊಳಗೆ ಒತ್ತಡದಲ್ಲಿ ಇರುತ್ತಾರೆ. ಅವರು ಮನೆ ಗೆಲಸದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಪರಸ್ಪರ ತಮ್ಮ ಸಮಸ್ಯೆ ಹಂಚಿಕೊಳ್ಳಬೇಕು. ಒಳ್ಳೆಯ ವಿಚಾರ ಅರಿಯಲು ಇಂತಹ ಕಾರ್ಯಕ್ರಮ ಸಹಾಯಕವಾಗಿದೆ. ಭಜನೆ, ಹಾಡು ಇನ್ನು ಹಲವಾರು ಸಂಸ್ಕಾರಗಳು ಬೇರೂರಿ ದಾಗ ಅದು ಸಮಾಜದ ಮೇಲೆ ಉತ್ತಮ ಪರಿಣಾಮವನ್ನು ಬೀರುತ್ತದೆ ಎಂದು ಹೇಳಿದರು.
ಹಾಡು ಮತ್ತು ಭಜನೆಗೆ ರಾಗ ಮುಖ್ಯವಲ್ಲ, ಭಾವ ಮುಖ್ಯ. ಉತ್ತಮ ಹಾಡುಗಾರರ ಜೊತೆಗೆ ಧ್ವನಿಗೂಡಿಸಿದಾಗ ತನ್ನಿಂತಾನೇ ಅವರು ಅದ್ಭುತ ಹಾಡುಗಾರ ರಾಗುತ್ತಾರೆ. ಭಕ್ತಿಯಲ್ಲಿ ತಲ್ಲೀನರಾದಾಗ, ಸ್ವಾಭಾವಿಕವಾಗಿ ಉತ್ತಮ ವಾದ ಸ್ವರ ಹೊರಹೊಮ್ಮುತ್ತದೆ. ಅದರಿಂದ ಹೃದಯಕ್ಕೆ ಆನಂದ, ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಎಂದು ಕೂಡ ತಿಳಿಸಿದರು.
ಸದ್ಗುಣ, ಸಚ್ಚಾರಿತ್ರ್ಯ, ಸಹಕಾರ ಮನೋಭಾವನೆ, ಸಂಸ್ಕಾರ ಇವುಗಳು ಭಜನೆಯಿಂದ ಹೊರಬರಲು ಸಾಧ್ಯ. ಇದು ಕೇವಲ ಮಹಿಳೆಯರ ಸಂಘಟನೆ ಮಾತ್ರವಲ್ಲ. ಭಕ್ತಿ ಮತ್ತು ಭಾವದ ಸಮ್ಮೇಲನವಾಗಿದೆ. ಅತಿ ಹೆಚ್ಚು ಸಂಖ್ಯೆಯಲ್ಲಿ ಹೆಣ್ಣು ಮಕ್ಕಳನ್ನು ಸೇರಿಸಿಕೊಂಡು ಇಂತಹ ಕಾರ್ಯಕ್ರಮ ಹಮ್ಮಿಕೊಂಡಾಗ, ನಮಗರಿವಿಲ್ಲದೇ ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಜಿಲ್ಲಾ ಜಂಗಮ ಸಮಾಜ ಅಧ್ಯಕ್ಷ ಟಿ. ವಿ. ಈಶ್ವರಯ್ಯ, ವಿನೋಬನಗರ ವೀರಶೈವ ಸಮಿತಿ ಅಧ್ಯಕ್ಷ ಎಚ್. ಮಲ್ಲಿಕಾರ್ಜುನ ಸ್ವಾಮಿ, ತಾಲೂಕು ಸಮಾಜ ಅಧ್ಯಕ್ಷ ಉಮೇಶ್ ಹಿರೇಮಠ್, ಜಿಲ್ಲಾ ಜಂಗಮ ಮಹಿಳಾ ಸಮಾಜದ ಅಧ್ಯಕ್ಷ ಸುಜಯ ಪ್ರಸಾದ್ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.