ಭಾರತದಲ್ಲಿ ವರ್ಷಕ್ಕೆ ಸುಮಾರು 3 ಲಕ್ಷ ಜನರು ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಮಲ್ನಾಡ್ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ತಜ್ಞ ಡಾ.ರೋಷನ್ ಬಿ.ಎ.ರಾವ್ ಹೇಳಿದರು.
ಕುವೆಂಪು ವಿವಿಯ ಆರೋಗ್ಯ ಕೇಂದ್ರ ಮತ್ತು ಶಿವಮೊಗ್ಗದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ಸಹಯೋಗದೊಂದಿಗೆ ಕ್ಯಾನ್ಸರ್ ಕಾಯಿಲೆ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಆಧುನಿಕ ಜೀವನಶೈಲಿ, ಆಹಾರ ಪದ್ಧತಿ ಮತ್ತು ದುಶ್ಚಟಗಳು ಮಾರಣಾಂತಿಕ ಕ್ಯಾನ್ಸರ್ ಗೆ ಕಾರಣ. ಆದ್ದರಿಂದ , ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು ಮತ್ತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಕ್ಯಾನ್ಸರ್ ತಡೆಯಬಹುದು ಎಂದು ಕುಲಸಚಿವೆ ಜಿ. ಅನುರಾಧ ಅವರು ತಿಳಿಸಿದರು.
ತಂಬಾಕು ಸೇವನೆ, ಮದ್ಯಪಾನ, ಧೂಮಪಾನ, ಜೀವನದ ಒತ್ತಡ, ಡ್ರಗ್ಸ್ ಸೇವನೆ, ದೀರ್ಘಕಾಲದಿಂದ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಕ್ಯಾನ್ಸರ್ ಕಾಯಿಲೆ ಸಾಧ್ಯತೆ ಹೆಚ್ಚು. ಕ್ಯಾನ್ಸರ್ ಪೀಡಿತರಲ್ಲಿ ಬಹುತೇಕರು ತಂಬಾಕು ಸೇವನೆ, ಧೂಮಪಾನ ಮತ್ತು ಮದ್ಯವ್ಯಸನಿಗಳಾಗಿದ್ದಾರೆ.
ಒಂದು ಅಥವಾ ಎರಡು ವಾರಗಳಿಗೂ ಅಧಿಕ ಸಮಯ ಬಾಯಿಯಲ್ಲಿ ಗಾಯ ಗುಣವಾಗದಿರುವುದು, ಧ್ವನಿ ಬದಲಾವಣೆ, ಊಟ ಕಡಿಮೆ ಸೇರುವುದು, ಮೂತ್ರದಲ್ಲಿ ರಕ್ತ ಹೋಗುವಿಕೆ, ಮೂಳೆಗಳಲ್ಲಿ ನೋವು ಮತ್ತು ದೇಹದಲ್ಲಿ ಗಡ್ಡೆಗಳು ಕಾಣಿಸಿಕೊಳ್ಳುವುದು ಕ್ಯಾನ್ಸರ್ ನ ಮುನ್ಸೂಚನೆಗಳಾಗಿವೆ. ಆದ್ದರಿಂದ ಆರಂಭಿಕ ಹಂತದಲ್ಲಿ ಚಿಕಿತ್ಸೆ ಪ್ರಾರಂಭಿಸಿದರೆ ಕ್ಯಾನ್ಸರ್ ನಿಂದ ಗುಣಮುಖರಾಗಬಹುದು ಎಂದು ಡಾ.ರೋಷನ್ ಬಿ.ಎ.ರಾವ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಆರೋಗ್ಯಧಿಕಾರಿ ಡಾ. ಶ್ರೀ ರಕ್ಷಾ, ಮಹಿಳಾ ವೈದ್ಯಾಧಿಕಾರಿ ಡಾ. ಉಷಾರಾಣಿ, ಆಪ್ತಸಮಾಲೋಚಕಿ ರಜಿನಿ, ಹಸಿನಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.