ಕೃಷಿ ಕಾಯ್ದೆ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳನ್ನು ವಿರೋಧಿಸಿ ನಡೆದ ರೈತರ ಪ್ರತಿಭಟನೆಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿ ಹೆದ್ದಾರಿ ತಡೆದು ರೈತರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಿಲ್ಲಿ ರೈತರ ಹೋರಾಟದ ವರ್ಷಾಚರಣೆ ಮತ್ತು ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಕನಿಷ್ಟ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ ಮತ್ತು ಹೆದ್ದಾರಿ ತಡೆಗೆ ಕರೆ ನೀಡಿತ್ತು.
ಪ್ರಧಾನಿ ಮೋದಿ ಮೂರು ಕೃಷಿ ಕಾಯ್ದೆಗಳನ್ನು ಚುನಾವಣೆ ಹಿನ್ನೆಲೆಯಲ್ಲಿ ವಾಪಸ್ ಪಡೆದಿದ್ದಾರೆ. ಇದರ ಹಿಂದೆ ರೈತರ ಹಿತ, ಕಾಳಜಿ ಕಾಣುತ್ತಿಲ್ಲ. ಹೀಗಾಗಿ ಎಲ್ಲಾ ಬೇಡಿಕೆ ಈಡೇರುವವರೆಗೂ ಹೋರಾಟ .
ಕನಿಷ್ಠ ಬೆಂಬಲ ಬೆಲೆಯನ್ನು ವೈಜ್ಞಾನಿಕ ರೀತಿಯಲ್ಲಿ ನಿಗದಿ ಮಾಡಬೇಕು. ಜಲ ಜೀವನ್ ಮಿಷನ್ ಹೆಸರಿನಲ್ಲಿ ಗ್ರಾಮೀಣ ಪ್ರದೇಶದ ಮನೆಗಳ ನೀರಿನ ಸಂಪರ್ಕ ಮೀಟರ್ ಅಳವಡಿಕೆ ನಿರ್ಧಾರ ಕೈಬಿಡಬೇಕು.
ಹಾಲು ಒಕ್ಕೂಟ ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿನ ಬೆಲೆಯನ್ನು ನಾಲ್ಕು ರೂಪಾಯಿ ಕಡಿಮೆ ಮಾಡಿದೆ. ಮತ್ತೊಂದೆಡೆ ಗ್ರಾಹಕರಿಗೆ ಹಳೆಯ ದರದಲ್ಲೇ ಹಾಲು ಮಾರುತ್ತಿದೆ. ಈ ಮೂಲಕ ಇಬ್ಬರಿಗೂ ವಂಚನೆ ಮಾಡಲಾಗುತ್ತಿದೆ. ಇದನ್ನು ಸರಿಪಡಿಸಿ ಹಿಂದಿನ ದರದ ಪ್ರಕಾರ ವಹಿವಾಟು ನಡೆಸಬೇಕು.
ಹೋರಾಟದಲ್ಲಿ ಹುತಾತ್ಮರಾದ ರೈತರ ಅವಲಂಬಿತರಿಗೆ ಮಾಸಿಕ ಭತ್ಯೆ ನೀಡಬೇಕು. ರೈತರ ಮೇಲಿನ ಮೊಕದ್ದಮೆ, ಹಿಂಪಡೆಯಬೇಕು.
ಅನಾವೃಷ್ಟಿ, ಅತಿವೃಷ್ಟಿಯಿಂದ ಆಗಿರುವ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡಬೇಕು. ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ಈ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಹೆದ್ದಾರಿ ತಡೆ ರೈತರ ಪ್ರತಿಭಟನೆ
Date: