ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷರ ಪತ್ರವು ಪ್ರಧಾನಿ ಅವರಿಗೆ ತಲುಪಿದೆ. ಈಗಾಗಲೇ ಪ್ರತಿಪಕ್ಷದವರ ಪ್ರತಿಭಟನೆಗೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿಯವರು ಕ್ರಮ ಕೈಗೊಂಡಿದ್ದಾರೆ.
ಶ್ರೀ ಬೊಮ್ಮಾಯಿಯವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ 10 ಕೋಟಿ ರೂ. ಹೆಚ್ಚು ಅನುದಾನದ ಎಲ್ಲಾ ಟೆಂಡರ್ ಪ್ರಕ್ರಿಯೆ, ಪ್ರಗತಿ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಎಲ್ಲಾ ಇಲಾಖೆಗಳಿಗೆ ಆದೇಶಿಸಿದ್ದಾರೆ.
ನಾನು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಉಲ್ಲೇಖಿಸಲಾದ ಇಲಾಖೆಗಳಲ್ಲಿ ಮಂಜೂರಾದ ಪ್ರಮುಖ ಕಾಮಗಾರಿಗಳನ್ನು ಪರಿಶೀಲಿಸಿಬೇಕು. ಯಾವುದೇ ಲೋಪಗಳು ಕಂಡುಬಂದ ಕಡೆ ವಿಸ್ತೃತ ತನಿಖೆಗೆ ಒಳಪಡಬೇಕು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಅಥವಾ ಪ್ರಧಾನ ಕಾರ್ಯದರ್ಶಿಗಳಿಗೆ ಕೂಡಲೇ ನಿರ್ದೇಶನ ನೀಡಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಎಚ್. ಡಿ .ದೇವೇಗೌಡ ನವರು, ಗುತ್ತಿಗೆದಾರರ ಸಂಘ ಪ್ರಧಾನಿಗೆ ಬರೆದಿರುವ ‘ಕಮಿಷನ್ ‘ ಪತ್ರದ ವಿಚಾರದಲ್ಲಿ ಯಾವುದೇ ದೊಡ್ಡ ವ್ಯತ್ಯಾಸವಿಲ್ಲ. ರಾಜಕೀಯ ವ್ಯವಸ್ಥೆ ಈ ಮಟ್ಟಿಗೆ ಬರಲು ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ಕಾರಣ. ದಿಲ್ಲಿ ಮಟ್ಟದಲ್ಲಿ ದೊಡ್ಡ ನಾಯಕರು ಸೇರಿದರೆ ಏನಾದರೂ ಬದಲಾವಣೆ ತರಲು ಸಾಧ್ಯ ಎಂದಿದ್ದಾರೆ.
ಗುತ್ತಿಗೆ ಕಮಿಷನ್ ಪ್ರಕರಣ ತನಿಖೆಗೆ ಆದೇಶ
Date: