Monday, February 24, 2025
Monday, February 24, 2025

ಓಮಿಕ್ರಾನ್ ತಡೆ: ಪ್ರಧಾನಿ ಪೂರ್ವ ಸಿದ್ಧತಾ ಸಭೆ

Date:

ಕೋವಿಡ್-19 ಎರಡನೇ ಅಲೆ ಬಳಿಕ ಈಗ ವಿಶ್ವದಲ್ಲಿ ಓಮಿಕ್ರೋನ್ ರೂಪಾಂತರ ವೈರಸ್ ಅತ್ಯಂತ ಅಪಾಯಕಾರಿಯಾಗಿದೆ. ಭಾರತದಲ್ಲಿ ಮತ್ತೊಂದು ಅಲೆಯನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಜ್ಜಾಗುತ್ತಿವೆ.

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಅತ್ಯಂತ ಮಾರಕ ಎನ್ನಲಾಗುತ್ತಿರುವ ‘ಓಮಿಕ್ರಾನ್’ ರೂಪಾಂತರಿ ವೈರಸ್ ಹಲವು ದೇಶಗಳಲ್ಲಿ ಆತಂಕವನ್ನು ಉಂಟುಮಾಡಿದೆ.

ಭಾರತದಲ್ಲಿ ಈ ವೈರಸ್ ಪತ್ತೆಯಾಗಿಲ್ಲದಿದ್ದರೂ ಸಹ ಮುಂಜಾಗೃತಾ ಕ್ರಮವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿವೆ.

ರೂಪಾಂತರಿ ಓಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ವಿವಿಧ ಸಚಿವಾಲಯಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಹೊಸ ರೂಪಾಂತರಿ ಏನು-ಎತ್ತ? ಅದರ ಅಪಾಯಗಳೇನು? ಯಾವ ರಾಷ್ಟ್ರಗಳಲ್ಲಿ ಈ ವೈರಸ್ ಪತ್ತೆಯಾಗಿದೆ ಹಾಗೂ ಇನ್ನು ಹಲವು ಮಾಹಿತಿಯನ್ನು ಅಧಿಕಾರಿಗಳು ಪ್ರಧಾನಿ ಅವರಿಗೆ ವಿವರಿಸಿದರು.

ಪ್ರಧಾನಿ ಮೋದಿ ಅವರು ಅಧಿಕಾರಿಗಳಿಗೆ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇರಿಸುವುದು. ವಿದೇಶಗಳಿಂದ ಬರುವವರನ್ನು ವಾರೆಂಟ್ ಎಂಗೆ ಒಳಪಡಿಸಿ ಜಿನೋಮ್ ಸೀಕ್ವೆನ್ಸ್ ನಡೆಸಬೇಕು. ಸೋಂಕು ಕಾಣಿಸಿಕೊಂಡಿರುವ ದೇಶದಿಂದ ಬಂದವರ ಮೇಲೆ ಹೆಚ್ಚು ನಿಗಾ ಇರಿಸಬೇಕು. ಹೆಚ್ಚು ಸೋಂಕು ಇರುವೆಡೆ ಕಂಟೈನ್ ಮೆಂಟ್ ಮತ್ತು ನಿಗಾ ಚಟುವಟಿಕೆ ತೀವ್ರಗೊಳಿಸಬೇಕು. ಅಂತರ್ರಾಷ್ಟ್ರೀಯ ವಿಮಾನ ನಿರ್ಬಂಧ ಸಡಿಲಗೊಳಿಸುವ ಯೋಜನೆಯು ಮುಂದೂಡಬೇಕು. ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳ ಜೊತೆ ನಿಕಟವಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೇ ನೀಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ :ಹಿತರಕ್ಷಣಾ ವೇದಿಕೆ ಮುಖ್ಯಸ್ಥ ಸುರೇಶ್

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ. ಪೊಲೀಸ್ ಇಲಾಖೆ ಸೇರಿದಂತೆ ರಾಜಕಾರಣಿಗಳು...

ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ ವಿಧಾನ ಪರಿಷತ್ ಶಾಸಕಿ ಬಲ್ಕಿಶ್ ಬಾನು ಮಾಹಿತಿ

ಫೆ.25 ರಂದು ವಸತಿ ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಗೋವಿಂದಾ...