ಮಾದಕ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು.
ಭಯೋತ್ಪಾದನೆಗೆ ಹಣಕಾಸು ನೆರವು ನೀಡುವ ಸಲುವಾಗಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರಕ್ಕೆ ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದೆ. ಈ ಕೃತ್ಯಕ್ಕೆ ಇಲ್ಲಿನ ಯುವಕರು ಬಲಿಯಾಗುತ್ತಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ ಬಾಗ್ ಸಿಂಗ್ ಅವರು ಹೇಳಿದ್ದಾರೆ.
ಜಾಗರ್ ಕೋಟ್ಲಿಯಲ್ಲಿ 52ಕೆ.ಜಿ ಹೆರಾಯಿನ್ ಸಿಕ್ಕಿದೆ. ಹಾಗೂ ಇದಕ್ಕೂ ಮುಂಚೆ ಪೂಂಚ್, ಕುಪ್ವಾರ್, ಬಾರಾಮುಲ್ಲಾ ಇನ್ನೂ ಮುಂತಾದ ಗಡಿ ಪ್ರದೇಶಗಳಲ್ಲಿ ಹೆರಾಯಿನ್ ದೊರೆತಿದೆ. ಮಾದಕವಸ್ತು ಪೂರೈಕೆಗಾಗಿ ಯೋಜಿತ ತಯಾರಿ ನಡೆಸಿರುವ ಪಾಕಿಸ್ತಾನವು ತನ್ನ ದೇಶಗಳಿಗೆ ಇಲ್ಲಿನ ಯುವಕರನ್ನು ಬಲಿ ಪಡೆದುಕೊಳ್ಳುತ್ತಿದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಎನ್ ಡಿ ಪಿ ಎಸ್ ಕಾಯ್ದೆಯ ಅಡಿ ದಾಖಲಾಗುವ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಪಡಿಸುವ ಪ್ರಮಾಣವನ್ನು ಹೆಚ್ಚಳ ಮಾಡ ಬೇಕು. ಈ ನಿಟ್ಟಿನಲ್ಲಿ ಪೊಲೀಸರು ವೃತ್ತಿಪರವಾಗಿ ಕಾರ್ಯನಿರ್ವಹಿಸಬೇಕು. ಅಂತ ರ ಮಾದಕವಸ್ತು ಜಾಲವನ್ನು ಗುರುತಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ ಬಾಗ್ ಸಿಂಗ್ ಸೂಚನೆ ನೀಡಿದ್ದಾರೆ.