ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಬಳಿ ಅಕ್ರಮವಾಗಿ ಗೋ ಸಾಗಾಣಿಕೆಗೆ ಯತ್ನಿಸುತ್ತಿದ್ದ, ಪಿಕಪ್ ವಾಹನವನ್ನು ತಡೆಯಲು ಮುಂದಾದ ಭಜರಂಗದಳದ ಇಬ್ಬರು ಕಾರ್ಯಕರ್ತರ ಮೇಲೆ ಗೋಕಳ್ಳರು ವಾಹನ ಹತ್ತಿಸಿ ಪರಾರಿಯಾಗಲು ಯತ್ನಿಸಿದ್ದಾರೆ.
ಸ್ಥಳೀಯರ ನೆರವಿನಿಂದ ಇಬ್ಬರೂ ಗೋಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಘಟನೆಯಲ್ಲಿ ಗಂಭೀರವಾಗು ಗಾಯಗೊಂಡಿರುವ ಚರಣ್ ಹಾಗೂ ಕಿರಣ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾನ್ಯ ಗೃಹಸಚಿವ ಅರಗ ಜ್ಞಾನೆಂದ್ರ ಅವರು ಆಸ್ಪತ್ರೆಗೆ ತೆರಳಿ, ಗಾಯಗೊಂಡ ಸಹೋದರರ ಆರೋಗ್ಯ ವಿಚಾರಿಸಿದ್ದಾರೆ.

ರಾಜ್ಯದಲ್ಲಿ ಅಕ್ರಮ ಗೋ ಸಾಗಾಣಿಕೆ ವಿರುದ್ಧ ಕಠಿಣ ಕಾನೂನು ಜಾರಿಯಾಗಿದೆ. ಅದನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಲು ನಿರ್ದೇಶನ ನೀಡಲಾಗಿದೆ. ತೀರ್ಥಹಳ್ಳಿ ತಾಲೂಕು ಮೇಳಿಗೆ ಗ್ರಾಮದಿಂದ ಅಕ್ರಮವಾಗಿ ದನಗಳನ್ನು ಸಾಗಾಣಿಕೆ ಮಾಡುತ್ತಿದ್ದರು. ಇದನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಹಲ್ಲೆ ನಡೆದಿದೆ. ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಮಾನ್ಯ ಗೃಹ ಸಚಿವರು ತಿಳಿಸಿದರು.
ಗಂಭೀರ ಗಾಯಗೊಂಡ ಇಬ್ಬರು ಯುವಕರು ತೀರ್ಥಹಳ್ಳಿ ಸಮೀಪದ ಕಿತ್ತನಗದ್ದೆ ಗ್ರಾಮದ ಚರಣ್ ಹಾಗೂ ಕಿರಣ್. ಮೇಳಿಗೆ ಯಿಂದ ಗೋವುಗಳ ಸಾಗಾಣಿಕೆ ವಿಷಯ ತಿಳಿದು ಬುಲೆಟ್ ಬೈಕಿನಲ್ಲಿ ಬೆನ್ನಟ್ಟಿ ದ್ದಾರೆ. ಈ ವಿಷಯ ತಿಳಿದ ಜಾನುವಾರು ಕಳ್ಳರು ಬೆಜ್ಜವಳ್ಳಿ ಯ ಸಮೀಪ ಬೈಕ್ ಸವಾರರ ಮೇಲೆ ವಾಹನ ಹತ್ತಿಸಿ ಪರಾರಿಯಾಗಿದ್ದಾರೆ.
ಅಲ್ಲಿನ ಸ್ಥಳೀಯರು ಘಟನಾ ಸ್ಥಳದಿಂದ ಪರಾರಿಯಾಗುತ್ತಿದ್ದ ಶಿವಮೊಗ್ಗ ನಗರದ ನವೀನ್ ಎಂಬುವವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೋರ್ವ ತೀರ್ಥಹಳ್ಳಿಯ ಶ್ರೀಧರ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಈ ಸಂಬಂಧ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಅವರು ಪ್ರತಿಭಟನೆಯನ್ನು ನಡೆಸಿದರು.