ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಒಳಗಾಗಿದ್ದನ್ನು ಎನ್ಆರ್ ಸಿ (ರಾಷ್ಟ್ರೀಯ ನಾಗರಿಕ ನೊಂದಣಿ) ಯನ್ನು ದೇಶಾದ್ಯಂತ ಜಾರಿಗೊಳಿಸುವ ಕುರಿತು ಇದುವರೆಗೂ ಯಾವುದೇ ರೀತಿಯ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.
ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್ ಅವರು ” ಅಸ್ಸಾಂನಲ್ಲಿ ಮಾತ್ರ ಎನ್ಆರ್ಸಿ ಜಾರಿಗೊಳಿಸಲಾಗಿದೆ. ಆದರೆ ಇದನ್ನು ದೇಶಾದ್ಯಂತ ಜಾರಿಗೊಳಿಸುವ ಕುರಿತು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿಲ್ಲ. ಅದರ ಕುರಿತು ಚರ್ಚೆ, ಸಿದ್ಧತೆ ಸಹ ನಡೆಸಿಲ್ಲ” ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
“ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ)-2019 ಕುರಿತು 2019ರ ಡಿಸೆಂಬರ್ 12 ರಂದು ಅಧಿಸೂಚನೆ ಹೊರಡಿಸಲಾಗಿದೆ. 2020ರ ಜನವರಿ 10ರಿಂದ ಜಾರಿಯಾಗಿದೆ. ಆದರೆ ಸಿಎಎ ನಿಯಮಗಳ ಕುರಿತು ಅಧಿಸೂಚನೆ ಹೊರಡಿಸಿದ ಬಳಿಕ ಅರ್ಜಿ ಸಲ್ಲಿಸಬಹುದು” ಎಂದು ನಿತ್ಯಾನಂದ ರಾಯ್ ಮಾಹಿತಿ ತಿಳಿಸಿದ್ದಾರೆ.
ದೇಶದ ಪೌರತ್ವ ಪಡೆಯಲು ಕಳೆದ ಐದು ವರ್ಷದಲ್ಲಿ 10,645 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಈವರೆಗೂ 4,177 ಜನಕ್ಕೆ ಪೌರತ್ವ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಆರು ಲಕ್ಷಕ್ಕೂ ಅಧಿಕ ಭಾರತೀಯರು ಕಳೆದ ಐದು ವರ್ಷದಲ್ಲಿ ದೇಶದ ಪೌರತ್ವ ತೊರೆದಿದ್ದಾರೆ ಎಂದು ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದರ ಮಾಹಿತಿ ನೀಡಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.