Sunday, December 14, 2025
Sunday, December 14, 2025

ಎಚ್ಐವಿ ಸೋಂಕಿತರನ್ನ ತಾರತಮ್ಯ ಕೂಡದು

Date:

ಏಡ್ಸ್ ರೋಗದ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸುವುದು ಮತ್ತು ಹೆಚ್‍ಐವಿ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಮತ್ತು ಮಾನಸಿಕ ಸ್ಥೈರ್ಯ ತುಂಬುವುದೇ ವಿಶ್ವ ಏಡ್ಸ್ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ. ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕೆಂದು ವಿಡಿಎಲ್ ಉಪನಿರ್ದೇಶಕ ಡಾ.ರಘುನಂದನ್ ಹೇಳಿದರು.
ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೋಲಿಸ್ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ನ್ಯಾಯವಾದಿಗಳ ಸಂಘ ಶಿವಮೊಗ್ಗ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾಪೂಜಿನಗರ, ಎನ್.ಎಸ್.ಎಸ್ ಘಟಕ-1,2,3, ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳು, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಐಎಂಎ ಸಭಾಂಗಣದಲ್ಲಿ ವಿಶ್ವ ಏಡ್ಸ್ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು.
ಏಡ್ಸ್ ಖಾಯಿಲೆ ಬಗ್ಗೆ ತಿಳಿಯುವುದು ಅತ್ಯವಶ್ಯವಾಗಿದೆ. ಆದರೆ ಏಡ್ಸ್ ಪ್ರಸ್ತುತ ಮಾರಣಾಂತಿಕವಲ್ಲ. ಸೂಕ್ತ ಮತ್ತು ನಿಯಮಿತ ಚಿಕಿತ್ಸೆಯಿಂದ ಇದನ್ನು ನಿಯಂತ್ರಿಸಬಹುದು. ಹೆಚ್‍ಐವಿ ಪೀಡಿತರನ್ನು ಎಲ್ಲರಂತೆ ಕಾಣಬೇಕು. ಏಡ್ಸ್ ಬಗ್ಗೆ ಇರುವ ಮೌಢ್ಯತೆಯನ್ನು ಮಟ್ಟ ಹಾಕುವ ದಿನ ಇದಾಗಿದ್ದು, ಇದೂ ಕೂಡ ಸಕ್ಕರೆ ಮತ್ತು ಇತರೆ ಖಾಯಿಲೆ ರೀತಿಯ ಒಂದು ಖಾಯಿಲೆಯಾಗಿದೆ. ಚಿಕಿತ್ಸೆಯಿಂದ ಸೂಕ್ತವಾಗಿ ನಿಯಂತ್ರಿಸಬಹುದು ಹಾಗೂ ಈ ಸೋಂಕಿನ ಕುರಿತಾದ ಅರಿವಿನಿಂದ ಇದನ್ನು ದೂರ ಇಡಬಹುದು.


ಆದ್ದರಿಂದ ಎಚ್ ಐವಿ ಸೋಂಕಿತರನ್ನ ತಾರತಮ್ಯದಿಂದ ನೋಡದೆ ಎಲ್ಲರಂತೆ ಕಾಣಬೇಕು ಎಂದು ಕಿವಿಮಾತು ಹೇಳಿದರು.
ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಅಧ್ಯಕ್ಷ ಡಾ.ಶಿವಯೋಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, 1981 ರಲ್ಲಿ ಮೊತ್ತ ಮೊದಲಿಗೆ ಅಮೇರಿಕಾದ ಲಾಸ್ ಏಂಜಲೀಸ್ ಪ್ರದೇಶದಲ್ಲಿ ವ್ಯಕ್ತಿಯೋರ್ವನಲ್ಲಿ ಹೆಚ್‍ಐವಿ ಸೋಂಕು ಕಂಡು ಬಂದಿತು. ಇದೊಂದು ಮಾರಣಾಂತಿಕ ಸೋಂಕಾಗಿದ್ದು ಈ ಕುರಿತು ಜಾಗೃತಿ ಮೂಡಿಸಲು ಮತ್ತು ನಿಯಂತ್ರಣ ಸಾಧಿಸುವ ಸಲುವಾಗಿ 1988 ರಿಂದ ವಿಶ್ವ ಏಡ್ಸ್ ದಿನಾಚರಣೆ ಮಾಡಲಾಗುತ್ತಿದೆ.
ಹೆಚ್‍ಐವಿ ಸೋಂಕು ಅಸುರಕ್ಷಿತ ಲೈಂಗಿಕ ಸಂಪರ್ಕ, ಸಂಸ್ಕರಿಸದ ಸೂಜಿ ಮತ್ತು ಸಿರಂಜ್ ಬಳಕೆ, ತಪಾಸಣೆಗೊಳಪಡಿಸದ ರಕ್ತ ಮತ್ತು ಅದರ ಪದಾರ್ಥಗಳು ಹಾಗೂ ಗರ್ಭದಿಂದ ತಾಯಿಯಿಂದ ಮಗುವಿಗೆ ಈ ನಾಲ್ಕು ಮಾರ್ಗಗಳಿಂದ ಬರುತ್ತದೆ. ಆದರೆ ಇತ್ತೀಚಿನ ಸುಧಾರಣೆಗಳಿಂದಾಗಿ ರಕ್ತ, ಸೂಜಿ ಮತ್ತು ತಾಯಿಯಿಂದ ಮಗುವಿಗೆ ಬರುವುದನ್ನು ನಿಯಂತ್ರಿಸಲಾಗಿದೆ. ಆದರೆ ಜನರು ತಮ್ಮ ಅರಿವನ್ನು ಹೆಚ್ಚಿಸಿಕೊಂಡು ಅಸುರಕ್ಷಿತ ಲೈಂಗಿಕತೆಯಿಂದ ಸೋಂಕು ತಗುಲುವುದನ್ನು ನಿಯಂತ್ರಿಸಬೇಕು. ಲೈಂಗಿಕತೆಯ ಮಡಿವಂತಿಕೆಯಿಂದ ಕೂಡ ಈ ಸೋಂಕು ಹೆಚ್ಚಾಗುತ್ತಿದ್ದು ಈ ಬಗ್ಗೆ ಶಿಕ್ಷಣ ಮತ್ತು ಅರಿವು ಹೆಚ್ಚಬೇಕು ಎಂದ ಅವರು ನಿಯಮಿತ ಚಿಕಿತ್ಸೆಯಿಂದ ಇದನ್ನು ಪರಿಣಾಮಕಾರಿಯಾಗಿ ನಿಯಂತ್ರಣದಲ್ಲಿಡಲು ಸಾಧ್ಯ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ 2015-16 ರಿಂದ ಅಕ್ಟೋಬರ್ 2021 ರವರೆಗೆ 4,24,017 ಸಾಮಾನ್ಯ ವ್ಯಕ್ತಿಗಳಿಗೆ ಹೆಚ್‍ಐವಿ ಪರೀಕ್ಷೆ ಮಾಡಿದ್ದು ಈ ಪೈಕಿ 2054 ಸೋಂಕಿತರು ಪತ್ತೆಯಾಗಿದ್ದಾರೆ. ಈ ಅಔದಿಯಲ್ಲಿ 2,21,600 ಗರ್ಭಿಣಿಯರಿಗೆ ಹೆಚ್‍ಐವಿ ಪರೀಕ್ಷೆ ಮಾಡಿದ್ದು ಇವರಲ್ಲಿ 79 ಗರ್ಭಿಣಿ ಸ್ತ್ರೀಯರಿದ್ದಾರೆ. ಹೆಚ್‍ಐವಿ ಚಿಕಿತ್ಸೆಗಾರಿ ಎಆರ್‍ಟಿ ಕೇಂದ್ರದಲ್ಲಿ 2008 ರಿಂದ 2021 ರವರೆಗೆ 6249 ವ್ಯಕ್ತಿಗಳು ನೋಂದಾಯಿಸಿಕೊಂಡಿದ್ದು 3161 ಜನರು ಚಿಕತ್ಸೆ ಪಡೆದು ಬದುಕುತ್ತಿದ್ದಾರೆ. 2089 ಜನರು ಸೋಂಕಿನಿಂದ ಮರಣ ಹೊಂದಿದ್ದಾರೆ. ಸರ್ಕಾರೇತರ ಸಂಸ್ಥೆಗಳಾದ ಅಭಯಧಾಮ ಹೆಚ್‍ಐವಿ ಸೋಂಕಿತರ ಬೆಂಬಲ ಸಂಘ, ರಕ್ಷ ಸಮುದಾಯ ಸಂಘ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಅಂತಹ ಸಂಸ್ಥೆಗಳು ಹೆಚ್‍ಐವಿ ನಿಯಂತ್ರಣ ಕಾರ್ಯಕ್ರಮದಡಿ ಕೆಲಸ ಮಾಡುತ್ತಿವೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಸಂಘ ಸಂಸ್ಥೆಗಳು, ಕಾಲೇಜುಗಳು, ದಾನಿಗಳು, ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ , ಕುವೆಂಪು ವಿವಿ ಎನ್‍ಎಸ್‍ಎಸ್ ಜಿಲ್ಲಾ ಕಾರ್ಯಕ್ರಮಾಧಿಕಾರಿ ಪರಿಸರ ನಾಗರಾಜ್, ಕುಟುಂಬ ಕಲ್ಯಾಣ ಕಾರ್ಯಕ್ರಮಾಧಿಕಾರಿ ಡಾ.ಮಂಜನಾಥ್ ನಾಗಲೀಕರ್, ಶಿವಮೊಗ್ಗ ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್, ಎಫ್‍ಪಿಎಐ ಅಧ್ಯಕ್ಷೆ ಪುಷ್ಪಾ ಶೆಟ್ಟಿ, ಸ್ಪಂದನಾ ಫೌಂಡೇಷನ್ ನ ಮಂಜುನಾಥ್ ಅಪ್ಪಾಜಿ, ಜ್ಯೋತಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...