ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಕಾನೂನು ಬೆಂಬಲ ನೀಡುವವರೆಗೂ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ ಎಂದು ಹಠ ಹಿಡಿದಿದ್ದ ರೈತ ಸಂಘಟನೆಗಳು ಈಗ ಪಟ್ಟನ್ನು ಕೊಂಚ ಸಡಿಲಿಸಿವೆ. ತಮ್ಮ ಇತರ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದರೆ ಪ್ರತಿಭಟನೆ ಹಿಂಪಡೆಯಬಹುದು ಎಂಬ ಮಾಹಿತಿಯನ್ನು ಮೂಲಗಳು ತಿಳಿಸಿವೆ.
ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ವಿಧೇಯಕವನ್ನು ಸಂಸತ್ ನಲ್ಲಿ ಅಂಗೀಕರಿಸಿರುವ ಕೇಂದ್ರ ಸರಕಾರವು ಈಗ ರೈತ ಸಂಘಟನೆಗಳ ಜೊತೆ ಮಾತುಕತೆಗೆ ಮುಂದಾಗಿದೆ. ಪ್ರತಿಭಟನಾನಿರತ 40 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಇದನ್ನು ಸ್ಪಷ್ಟಪಡಿಸಿದೆ.
ಕೇಂದ್ರದಿಂದ ಪಂಜಾಬ್ ರೈತ ಒಕ್ಕೂಟದ ನಾಯಕರಿಗೆ ಕರೆ ಬಂದಿದೆ. ರೈತರ ಬೇಡಿಕೆ ಈಡೇರಿಸುವುದು, ಸಮಸ್ಯೆ ಬಗೆಹರಿಸುವ ಕುರಿತು ರಚಿಸಲಿರುವ ಸಮಿತಿಗೆ ಎಸ್ ಕೆಎಂ ನ ಐವರು ಸದಸ್ಯರ ಹೆಸರು ತಿಳಿಸುವಂತೆ ಕೋರಲಾಗಿದೆ ಎಂದು ಮಾಹಿತಿ ನೀಡಿದೆ.
ಸರಕಾರ ರಚಿಸುವ ಸಮಿತಿಯಲ್ಲಿ ಯಾರಿದ್ದಾರೆ? ಯಾವ ಉದ್ದೇಶಕ್ಕಾಗಿ ಸಮಿತಿ ರಚಿಸಲಾಗುತ್ತಿದೆ ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಅದರಲ್ಲೂ, ಇದರ ಕುರಿತು ಲಿಖಿತ ಮಾಹಿತಿಯನ್ನು ಒದಗಿಸಿಲ್ಲ. ಹಾಗಾಗಿ ಇದುವರೆಗೆ ನಾವು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ.
ಲಿಖಿತ ಭರವಸೆ ಕೊಟ್ಟರೆ ಮಾತ್ರ ಪ್ರತಿಭಟನೆ ವಾಪಸ್
Date: