ಕೊರೊನಾ ವೈರಾಣುವಿನ ರೂಪಾಂತರಿ ಓಮಿಕ್ರಾನ್ ಬೆಂಗಳೂರಿನ ಮೂಲಕ ಭಾರತಕ್ಕೂ ಲಗ್ಗೆ ಇಟ್ಟಿದೆ. ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿರುವ 46 ವರ್ಷದ ವೈದ್ಯರೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಜೆಪಿ ನಗರದಲ್ಲಿ ವಾಸವಿರುವ ಸೋಂಕಿತರ ಸಂಪರ್ಕದಲ್ಲಿದ್ದ ಪತ್ನಿ ಸೇರಿ ಐದು ಮಂದಿಗೆ ಕೊರೊನಾ ಸೋಂಕು ತಲುಪಿದೆ. ಇವರೆಲ್ಲರೂ ಕೂಡ ವೈದ್ಯರಾಗಿದ್ದಾರೆ. ಮನೆಯಲ್ಲಿ ಪ್ರತ್ಯೇಕ ತಾರೀಕಿಗೆ ಒಳಗಾಗಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನ ಸಮರ್ಥ ಪರೀಕ್ಷೆ ವ್ಯವಸ್ಥೆಯಿಂದಾಗಿ ಬೇಗನೆ ಕೋವಿಡ್ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ. ಜನರು ತಪ್ಪದೇ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಸೋಂಕಿತ ವೈದ್ಯ ಹಾಗೂ ಇತರೆ ಇಬ್ಬರೂ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ವೈದ್ಯರು ಎರಡೂ ಡೋಸ್ ಲಸಿಕೆ ಪಡೆದುಕೊಂಡಿದ್ದರು. ಇವರು ಯಾವುದೇ ಪ್ರಯಾಣ ಇತಿಹಾಸ ಹೊಂದಿರಲಿಲ್ಲ. ಆದರೂ ಸೋಂಕು ಹೇಗೆ ತಲುಪಿತು ಎಂಬುದು ನಿಗೂಢವಾಗಿದೆ.
ಆತಂಕಕ್ಕೊಳಗಾಗಬೇಡಿ -ಡಾ. ಸುಧಾಕರ್
Date: