Monday, June 23, 2025
Monday, June 23, 2025

ಮೊದಲ ದಿನ ಮಯಾಂಕ್ ಆಕರ್ಷಕ ಶತಕ

Date:

2 ನೇ ಟೆಸ್ಟ್ ಟೂರ್ನಿಯ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಪಂದ್ಯದ ಇಂದಿನಿಂದ ಆರಂಭವಾಗಲಿದೆ.

ವಾಂಕೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ನಲ್ಲಿ ಗೆದ್ದವರಿಗೆ ಸರಣಿ ಕಿರೀಟ ಒಲಿಯಲಿದೆ. ಆದ್ದರಿಂದ ಈ ಟೆಸ್ಟ್ ಮ್ಯಾಚ್ ಮಹತ್ವದ್ದಾಗಿದೆ. ಮೊದಲ ಪಂದ್ಯದಲ್ಲಿ ರೋಚಕ ಡ್ರಾ ಸಾಧಿಸುವಲ್ಲಿ ಯಶಸ್ವಿಯಾದ ಕೇನ್ ವಿಲಿಯಮ್ಸನ್ ಬಳಗವು, ಆತಿಥೇಯರಿಂದ ಗೆಲುವು ಕಸಿದುಕೊಂಡಿತು. ವಿಶ್ವ ಚಾಂಪಿಯನ್ ತಂಡಕ್ಕೆ ತಕ್ಕಂತೆ ಆಡಿತ್ತು.

ಇಂದು ನಡೆಯಲಿರುವ ಪಂದ್ಯದಲ್ಲಿ ದೀರ್ಘಕಾಲದ ವಿಶ್ರಾಂತಿಯ ಬಳಿಕ ಅಂಕಣಕ್ಕೆ ವಿರಾಟ್ ಕೊಹ್ಲಿ ಮರಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

ಕಾನ್ಪುರ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಶ್ರೇಯಸ್ ಅಯ್ಯರ್ ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಮತ್ತು ಅರ್ಧಶತಕ ಬಾರಿಸಿ ಮಿಂಚಿದರು. ಇದರಿಂದಾಗಿ ತಮ್ಮ ತವರು ಅಂಗಳದಲ್ಲಿ ಆಡುವ ಅವಕಾಶ ಪಡೆಯುವುದು ಖಚಿತವಾಗಿದೆ.

ಮೊದಲ ಟೆಸ್ಟ್ ನಲ್ಲಿ ಅರ್ಧಶತಕ ಬಾರಿಸಿದ್ದ ಶುಭಮನ್ ಗಿಲ್ ಸ್ಥಾನ ಉಳಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಮಯಂಕ್ ಮತ್ತೊಂದು ಅವಕಾಶ ಗಿಟ್ಟಿಸಿದರು. ರಹನೆ ಅಥವಾ ಪೂಜಾರ ಬೆಂಚ್ ಕಾಯಬೇಕಾಗಬಹುದು. ಕಳೆದ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದ ವೃದ್ಧಿಮಾನ್ ಸಹಾ ಕತ್ತು ನೋವಿನಿಂದಾಗಿ ಕೀಪಿಂಗ್ ಮಾಡಿರಲಿಲ್ಲ ಅವರ ಬದಲಿಗೆ ಕೀಪಿಂಗ್ ಮಾಡಿದ್ದ ಶ್ರೀಕರ್ ಭರತ್ ಚುರುಕಿನ ಆಟದಿಂದ ಸೆಳೆದಿದ್ದರು.

ಇದೀಗ ಕೊಹ್ಲಿಯ ಎದುರು ಇರುವ ಪ್ರಮುಖ ಸವಾಲೆಂದರೆ ಬ್ಯಾಟಿಂಗ್ ಕ್ರಮಾಂಕವನ್ನು ಬಲಿಷ್ಠಗೊಳಿಸುವ ಅಂತಹ ತಂಡವನ್ನು ಕಣಕ್ಕಿಳಿಸುವುದಾಗಿ. ಅಲ್ಲದೆ ಹವಾಮಾನ ವೈಪರೀತ್ಯದಿಂದಾಗಿ ಕಳೆದ ದಿನಗಳಿಂದ ಮಳೆ ಸುರಿಯುತ್ತಿರುವುದು ವಾತಾವರಣವು ಆಟಗಾರರಿಗೆ ಕೂಡ ಕಠಿಣ ಸವಾಲಿದೆ. ಪಂದ್ಯ ನಡೆಯುವ 5 ದಿನಗಳಲ್ಲಿ ಬಹುತೇಕ ಮಳೆ ಬೀಳುವ ಮುನ್ಸೂಚನೆಯೂ ಇದೆ.

ಹಸಿರು ಹೆಚ್ಚಾಗಿ ಕಾಣುತ್ತಿರುವ ವಾಂಕೆಡೆ ಕ್ರೀಡಾಂಗಣದಲ್ಲಿ ವೇಗಿಗಳಿಗೆ ನೆರವು ನೀಡುವ ಸಾಮರ್ಥ್ಯವನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ಈ ಬಾರಿ ಕೇನ್ ವಿಲಿಯಂಸನ್ ಅವರನ್ನು ಕಣಕ್ಕಿಳಿಸುವ ನಿರೀಕ್ಷೆ ಇದೆ.
ತಂಡದ ಸೋಲು ತಪ್ಪಿಸಿದ ಯುವ ಪ್ರತಿಭೆ ರಚಿನ್ ರವಿಂದ್ರ ಮುಂಬೈನಲ್ಲಿ ಆಡುವುದು ಖಚಿತ. ಟಾಮ್ ಲತಾ ಮತ್ತು ವಿಲಿಯಂ ಮತ್ತೊಮ್ಮೆ ಭಾರತದ ಸ್ಪಿನ್ ಶಕ್ತಿಗೆ ಸವಾಲೊಡ್ಡಲು ಸಿದ್ದರಾಗಿದ್ದಾರೆ.

ಇಂದಿನ ಪಂದ್ಯದಲ್ಲಿ ಭಾರತ ತಂಡವು 221 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡಿದೆ. ಮಯಾಂಕ್ ಅಜೇಯ 120 ರನ್ ಗಳನ್ನು ಗಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...