ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಒಂದು ವರ್ಷದಿಂದ ನಡೆಯುತ್ತಿರುವ ಪ್ರತಿಭಟನೆ ವೇಳೆ ರೈತರು ಮೃತಪಟ್ಟಿದ್ದಾರೆ. ಅವರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರದ ಬಳಿ ಗುರುತ್ವ ರೈತರ ಮಾಹಿತಿ ಇಲ್ಲದಿದ್ದರೆ ತಾವು ಒದಗಿಸುವುದಾಗಿ ತಿಳಿಸಿದ್ದಾರೆ.
ಪ್ರತಿಭಟನೆ ವೇಳೆ ರೈತರು ಮೃತಪಟ್ಟಿರುವ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಮಾಹಿತಿ ನೀಡಿದೆ. ಇದನ್ನು ಖಂಡಿಸಿರುವ ರಾಹುಲ್ ಗಾಂಧಿ ದ್ವಿತೀಯ ರೈತರ ಪೂರ್ಣ ಪಟ್ಟಿ ಹಾಗೂ ಕೆಲವು ದಾಖಲೆಗಳನ್ನು ಸಂಸತ್ತಿನಲ್ಲಿ ಮಂಡಿಸುವ ಮೂಲಕ ಸರ್ಕಾರಕ್ಕೆ ತಲುಪಿಸುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಬಳಿ ಸದ್ಯ ನೂರು ಸಂತ್ರಸ್ತ ಕುಟುಂಬಸ್ಥರ ಹೆಸರಿದೆ. ಅದು ಕೂಡ ಪಂಜಾಬ್ ಹೊರತಾಗಿ ಇತರೆ ರಾಜ್ಯಗಳಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತರ ಮಾಹಿತಿ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿಯೂ ಮೃತ ರೈತರ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಹಾಗಿದ್ದೂ ಕೇಂದ್ರ ಸರ್ಕಾರ ಮಾತ್ರ ತನ್ನ ಬಳಿ ಪ್ರತಿಭಟನೆ ವೇಳೆ ರೈತರು ಮೃತಪಟ್ಟಿರುವ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಿರುವುದು ಹಾಸ್ಯಾಸ್ಪದ ಎಂದು ರಾಹುಲ್ ಗಾಂಧಿ
ತಿಳಿಸಿದ್ದಾರೆ.
ಮೃತ ರೈತರ ವಿವರ ಸಂಸತ್ತಿಗೆ ನೀಡುವೆ.- ರಾಹುಲ್ ಗಾಂಧಿ
Date: