ನವೆಂಬರ್ 28 ರಿಂದ ಡಿಸೆಂಬರ್ 1 ರ ನಡುವೆ ಬೆಂಗಳೂರಿಗೆ ಆಗಮಿಸಿದ ದಕ್ಷಿಣ ಆಫ್ರಿಕಾದ ಐವರು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ. ಅವರ ಇರುವಿಕೆಯ ಬಗ್ಗೆ ಅಧಿಕಾರಿಗಳಿಗೂ ಖಚಿತವಾಗಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ವಿವಿಧ ದೇಶಗಳಿಂದ ಆಗಮಿಸುವವರ ಮೇಲೆ ನಿಗಾ ಇರಿಸಲಾಗಿದೆ. ಅದರಲ್ಲಿಯೂ ವಿಶೇಷವಾಗಿ ದಕ್ಷಿಣ ಆಫ್ರಿಕಾದ ಪ್ರಯಾಣಿಕರ ಮೇಲೆ ಹೆಚ್ಚು ಗಮನ ಹರಿಸಲಾಗಿದೆ. ಏಕೆಂದರೆ ಆಫ್ರಿಕನ್ ಪ್ರಯಾಣಿಕರಲ್ಲಿ ಮೊದಲ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿತ್ತು.
ಡಿಸೆಂಬರ್ 1 ರಿಂದ, ದಕ್ಷಿಣ ಆಫ್ರಿಕಾದ ಎಲ್ಲಾ ಪ್ರಯಾಣಿಕರು ಮತ್ತು ಇತರೆ ಓಮಿಕ್ರಾನ ನಿಂದ
ಅಪಾಯದಲ್ಲಿರುವ ರಾಷ್ಟ್ರಗಳಿಂದ ಆಗಮಿಸಿದ ಪ್ರಯಾಣಿಕರಿಗೆ ಕಡ್ಡಾಯವಾಗಿ RT-PCR ಪರೀಕ್ಷೆಗೆ ಒಳಪಡಿಸಬೇಕು. ಆದಾಗ್ಯೂ, ಕಳೆದ ಮೂರು ವಾರಗಳಲ್ಲಿ ದಕ್ಷಿಣ ಆಫ್ರಿಕಾದಿಂದ KIA ಗೆ ಆಗಮಿಸಿದ ಪ್ರಯಾಣಿಕರನ್ನು ಅಧಿಕಾರಿಗಳು ಶೋಧಿಸುತ್ತಿದ್ದಾರೆ. ನಗರದಲ್ಲಿ ಓಮಿಕ್ರಾನ್ ಉಪಸ್ಥಿತಿ ವರದಿಯಾದ ನಂತರ, ವೈರಸ್ ಹರಡುವುದನ್ನು ನಿಯಂತ್ರಿಸುವ ಕ್ರಮಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸರಣಿ ಸಭೆಗಳನ್ನು ನಡೆಸಿತು. ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಅವರು 10 ರೋಗಿಗಳು ಕಾಣೆಯಾಗಿದ್ದಾರೆ ಎಂದು ಹೇಳಿದರು. ನಮಗೆ ಸಹಕರಿಸದ ಅಂತರಾಷ್ಟ್ರೀಯ ಪ್ರಯಾಣಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ನನಗೆ ತಿಳಿಸಿದೆ ಎಂದು ಸುಧಾಕರ್ ಹೇಳಿದರು. ಆದರೆ, ಕೇವಲ 5 ಮಂದಿ ಮಾತ್ರ ನಾಪತ್ತೆಯಾಗಿದ್ದಾರೆ ಎಂದು ಬಿಬಿಎಂಪಿ ಅಧಿಕೃತ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ. ಕಳೆದ ಮೂರು ವಾರಗಳಲ್ಲಿ ದಕ್ಷಿಣ ಆಫ್ರಿಕಾದಿಂದ 72 ಜನರು ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ನಾಗರಿಕ ಸಂಸ್ಥೆಯ ಅಂಕಿಅಂಶಗಳು ತೋರಿಸುತ್ತವೆ. ಅವರಲ್ಲಿ ಮೂವರು ಬೆಂಗಳೂರಿನಲ್ಲಿ ವಸತಿ ವಿಳಾಸಗಳನ್ನು ಒದಗಿಸಿದರೆ, ಇತರ 29 ಪ್ರಯಾಣಿಕರು ನಗರದ ಹೊರಗಿನ ವಿಳಾಸವನ್ನು ಒದಗಿಸಿದ್ದಾರೆ.
ಅಂತಾರಾಷ್ಟ್ರೀಯ ಪ್ರಯಾಣಿಕರ ಸಹಕಾರ ಅಗತ್ಯ- ಡಾ.ಸುಧಾಕರ್
Date: