ಹೊಸ ಕೊವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಪತ್ರ ಬರೆದಿದೆ.
ಸೋಂಕು ತಡೆಗಟ್ಟಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರ್ನಾಟಕ, ತಮಿಳು ನಾಡು ಮಿಜೋರಾಂ ಕೇರಳ, ಓಡಿಶಾ, ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರಕ್ಕೆ ಆರೋಗ್ಯ ಸಚಿವಾಲಯ ಸೂಚಿಸಿದೆ.
ಅಂತರರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಹೆಚ್ಚಿಸಬೇಕು.ಕೊವಿಡ್ ಹಾಟ್ ಸ್ಪಾಟ್ ಗಳ ಮೇಲ್ವಿಚಾರಣೆ ಮಾಡಬೇಕು.ಕೋವಿಡ್ ಪಾಸಿಟಿವ್ ವ್ಯಕ್ತಿಯ ಸಂಪರ್ಕಿತ ರನ್ನು ಪತ್ತೆಹಚ್ಚಬೇಕು, ಎಲ್ಲಾ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಕಳುಹಿಸಬೇಕು. ಆರೋಗ್ಯ ಮೂಲ ಸೌಕರ್ಯಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಏರಿಸಬೇಕು ಎಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬೂಸ್ಟರ್ ಡೋಸ್ ಗೂ ಮುನ್ನ ದೇಶದ ಅಧಿಕ ಸಂಖ್ಯೆಯ ಜನರು ಇನ್ನು ಲಸಿಕೆ ಹಾಕಿಸಿಕೊಳ್ಳುವುದು ಬಾಕಿಯಿದ್ದು, ಅವರೆಲ್ಲರಿಗೂ ಎರಡೂ ಡೋಸ್ ಲಸಿಕೆ ನೀಡಲು ಸರ್ಕಾರ ಚಿಂತನೆ ನಡೆಸಬೇಕು ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಹೊಸ ಕೋವಿಡ್ ಪ್ರಕರಣ: ಕೇಂದ್ರದಿಂದ ರಾಜ್ಯಗಳಿಗೆ ಪತ್ರ.
Date: