ಭಾರತೀಯ ಎಲೆಕ್ಟ್ರಾನಿಕ್ ಉದ್ಯಮಗಳ ಒಕ್ಕೂಟ ಇದ್ದಂತಹ ‘ಸೆಮಿಕಂಡಕ್ಟರ್ ವಲಯದಲ್ಲಿ ಭಾರತಕ್ಕಿರುವ ಅವಕಾಶಗಳು’ ಕುರಿತಂತೆ ವೆಬಿನಾರ್ ನಲ್ಲಿ ಮಾತನಾಡಿದ ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಅಶ್ವತ್ಥನಾರಾಯಣ ಅವರು ರಾಜ್ಯದಲ್ಲಿ ಸೆಮಿಕಂಡಕ್ಟರ್ ವಲಯವನ್ನು ಉತ್ತೇಜಿಸಲು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 200 ಎಕರೆ ಭೂಮಿಯನ್ನು ಈಗಾಗಲೇ ಗುರುತಿಸಲಾಗಿದೆ ಎಂದು ತಿಳಿಸಿದರು.
‘ಈ ಕ್ಷೇತ್ರದ ಹೂಡಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2 ಸಾವಿರ ಕೋಟಿ ಸಬ್ಸಿಡಿ ಕೊಡಲಾಗುತ್ತಿದೆ. ಸೆಮಿಕಂಡಕ್ಟರ್ ವಲಯದ ಕಂಪನಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವ ಕುರಿತು ಸರ್ಕಾರದೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ’ ಎಂದರು.
ಈ ವಲಯವನ್ನು ಸದೃಢವಾಗಿ ಬೆಳೆಸಲು ಈಗಾಗಲೇ ಮೈಸೂರಿನಲ್ಲಿ ಉತ್ಪನ್ನಗಳ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದ್ದು, ಅಗತ್ಯವೆನಿಸಿದರೆ ಇನ್ನೂ ಹಲವೆಡೆ ಇಂತಹ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಡಾ. ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.