ಬಡ ಮತ್ತು ಮಧ್ಯಮ ವರ್ಗದವರ ಆರೋಗ್ಯ ಸಮಸ್ಯೆಗೆ ಸಂಜೀವಿನಿಯಾಗಿದ್ದ ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆಗೆ ಈಗ ಮರುಜೀವ ತುಂಬಲು ಸರ್ಕಾರ ಮುಂದಾಗಿದೆ.
ಸರ್ಕಾರದ ಸೂಚನೆ ಮೇರೆಗೆ ಯಶಸ್ವಿನಿ ಯೋಜನೆ ಜಾರಿಗಾಗಿ ಸಲ್ಲಿಸಿರುವ ಸಹಕಾರ ಇಲಾಖೆಯು ಬರುವಂತಹ ಬಜೆಟ್ ನಲ್ಲಿ 300 ಕೋಟಿ ರು ಅನುದಾನ ಮೀಸಲಿಡುವಂತೆ ಮನವಿ ಮಾಡಿಕೊಂಡಿದೆ.
ಖಾಸಗಿ ಆಸ್ಪತ್ರೆಗೆ ದಾಖಲಾಗಲು ಸರ್ಕಾರಿ ಆಸ್ಪತ್ರೆ ಅನುಮತಿ ಅಗತ್ಯವಿಲ್ಲ. ಈ ಯೋಜನೆಯಿಂದ ಸಮಯದ ಉಳಿತಾಯ ಹಾಗೂ ಪರಿಣಾಮಕಾರಿ ಶಸ್ತ್ರಚಿಕಿತ್ಸೆ ಸಾಧ್ಯ. ರಾಜ್ಯದ ಬೃಹತ್ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ. ರೋಗಿಗಳು ಗಂಭೀರ ಕಾಯಿಲೆಗಳಿಗೆ ನಗದು ಹೊಂದಿಸುವ ಕಷ್ಟದಿಂದ ಮುಕ್ತಿ ಈ ಯೋಜನೆಯಿಂದ ಸಿಗಲಿದೆ.
ಯಶಸ್ವಿನಿ ಯೋಜನೆಯಿಂದ ವೈದ್ಯಕೀಯ ಕ್ಷೇತ್ರದ ಹದಿನಾಲ್ಕು ವಿಭಾಗಗಳಲ್ಲಿ ಗುರುತಿಸಿದ 295 ಕಾಯಿಲೆಗಳ 823 ಶಸ್ತ್ರಚಿಕಿತ್ಸೆಗೆ ನಗದು ರಹಿತ ಸೌಲಭ್ಯ ಪಡೆಯಬಹುದಾಗಿದೆ. ಮೊದಲಿದ್ದ 905 ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳ ಸಂಖ್ಯೆಯನ್ನು 1800ಕ್ಕೆ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಗ್ರಾಮೀಣ ಯಶಸ್ವಿನಿ ಯೋಜನೆಯಡಿಯಲ್ಲಿ ಪರೀಕ್ಷೆಗೆ ಒಳಗಾದ 1.25 ಲಕ್ಷ ರೂ. ಮಿತಿ ಹಾಗೂ ಒಂದಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆಗೆ ಒಳಗಾದರೆ 2 ಲಕ್ಷ ರೂ ನಗದು ರಹಿತ ಚಿಕಿತ್ಸೆ ಸೌಲಭ್ಯ ಪಡೆಯಬಹುದಾಗಿದೆ.