Monday, September 7, 2026
Monday, September 7, 2026

ಅನಿವಾರ್ಯ ಆದರೆ ಶಾಲೆಗಳು ಬಂದ್- ಸಚಿವರು

Date:

ಕೊರೋನಾ ಮೇಲೆ ಸರ್ಕಾರ ನಿಗಾ ವಹಿಸಿದೆ. ಒಂದು ವೇಳೆ ಶಾಲೆಗಳು ಮುಚ್ಚಬೇಕಾದ ಪರಿಸ್ಥಿತಿ ಎದುರಾದರೆ ಅಥವಾ ಪರೀಕ್ಷೆಗಳನ್ನು ಸ್ಥಗಿತಗೊಳಿಸುವ ಸಂದರ್ಭ ಉಂಟಾದರೆ ಆ ವಿಷಯದಲ್ಲಿ ಹಿಂದೇಟು ಹಾಕುವುದಿಲ್ಲ ಎಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

ಸದ್ಯ ಅಂತ ಯಾವುದೇ ಪರಿಸ್ಥಿತಿ ಇಲ್ಲ. ಪೋಷಕರು ಆತಂಕಕ್ಕೆ ಒಳಗಾಗುವುದು ಬೇಡ. ಮಕ್ಕಳ ಮೇಲೆ ಕೊಮಿಡಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಆದರೂ ನಮಗೆ ಮಕ್ಕಳ ಆರೋಗ್ಯ ತುಂಬಾ ಮುಖ್ಯ. ಪರಿಸ್ಥಿತಿ ಕೈಮೀರಿದರೆ ಪರ್ಯಾಯ ಏನು ಮಾಡಬೇಕು ಎಂದು ಯೋಚನೆ ಮಾಡುತ್ತೇವೆ. ತಜ್ಞರ ಸಲಹೆ ಪಡೆದ ನಂತರ, ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೂಡ ಹೇಳಿದರು.

ವಸತಿ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ದೃಢಪಟ್ಟಿದೆ. ಈ ಕುರಿತು ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರ ಜೊತೆ ಸಮಾಲೋಚನೆ ನಡೆಸಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ವಿಧಾನಸೌಧದಲ್ಲಿ ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...