ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಿರುವ ನಿರ್ಧಾರ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಹಾಗೂ ಮೀಸಲಾತಿ ನಿಗದಿ ಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗ ಹಿಂಪಡೆದಿದೆ. ಈ ನಿರ್ಧಾರ ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ನೀಡಿದೆ.
ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಋತುರಾಜ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಮತ್ತು ರಾಜ್ಯ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಕಳುಹಿಸಲು ಆದೇಶಿಸಿದೆ. ಈ ವಿಚಾರಣೆಯನ್ನು ನ್ಯಾಯಪೀಠ ಮುಂದೂಡಿದೆ.
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಿರುವ ನಿರ್ಧಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮಸ್ವರಾಜ್ಯ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಆಯೋಗವು ಪ್ರಶ್ನಿಸಿದೆ.
ಕರ್ನಾಟಕ ಗ್ರಾಮ ಸ್ವರಾಜ್ಯ ಹಾಗೂ ಪಂಚಾಯತ್ ರಾಜ್ ಕಾಯ್ದೆ 2021 ಅನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು. ಚುನಾವಣೆ ಆಯೋಗವು ಈಗಾಗಲೇ ಪ್ರಕಟಿಸುವ ಕರಡು ಮೀಸಲು ಮತ್ತು ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆ ಆಧರಿಸಿ ಚುನಾವಣೆ ಪ್ರಕ್ರಿಯೆ ಮುಂದುವರಿಸಬೇಕು. ಮೀಸಲು ಮತ್ತು ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿಯನ್ನು ಪ್ರಕಟಿಸಬೇಕು. ಅನಂತರ ಶೀಘ್ರ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.