ವಿದೇಶಗಳಿಂದ ಮಹಾರಾಷ್ಟ್ರಕ್ಕೆ ಬಂದವರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ಹೀಗಾಗಿ ಕೊರೋನಾ ನಿರ್ಬಂಧಗಳನ್ನು ಇನ್ನಷ್ಟು ಬಿಗಿಗೊಳಿಸುವ ಸಾಧ್ಯತೆ ಇದೆ.
ದಕ್ಷಿಣ ಆಫ್ರಿಕಾದಿಂದ ಆಗಮಿಸಿರುವ 37 ವರ್ಷದ ಯುವಕ ಹಾಗೂ ಅಮೆರಿಕ ದಿಂದ ಹಿಂದಿರುಗಿರುವ ಅವರ 36 ವರ್ಷದ ಸ್ನೇಹಿತನಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರಿಂದಾಗಿ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹತ್ತಕ್ಕೆ ಏರಿದೆ. ಡಿ.2ರಂದು ಏಳು ಪ್ರಕರಣಗಳು ದೃಢಪಟ್ಟಿವೆ. ದೇಶದಲ್ಲಿ ಒಟ್ಟು 23 ಜನರಿಗೆ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ.
ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗಿರುವ ಕಾರಣ ಎಲ್ಲರಲ್ಲೂ ಆತಂಕ ಸೃಷ್ಟಿಸಿದೆ.
ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಉದ್ದವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ಕೊರೋನಾ ಕಾರ್ಯಪಡೆ ಸಭೆ ನಡೆಯಲಿದೆ. ಕೊರೋನಾ ನಿರ್ಬಂಧಗಳನ್ನು ಬಿಗಿಗೊಳಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮಹಾರಾಷ್ಟ್ರ ಸರ್ಕಾರದ ವರದಿಗಳು ತಿಳಿಸಿವೆ.