ಕೋವಿಡ್ ಪರಿಸ್ಥಿತಿ ಉಲ್ಬಣಗೊಂಡರೆ ಶಾಲಾ ಕಾಲೇಜುಗಳನ್ನು ಮುಚ್ಚಲು ಹಿಂಜರಿಯುವುದಿಲ್ಲ ಎಂದು ಪ್ರಾರ್ಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಘೋಷಿಸಿದ ಬೆನ್ನಲ್ಲೇ, ರಾಜ್ಯಾದ್ಯಂತ ಇದುವರೆಗೆ ಸುಮಾರು 400ಕ್ಕೂ ಹೆಚ್ಚು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಕೊವಿಡ್ -19 ಸೋಂಕಿಗೆ ಒಳಗಾಗಿರುವುದು ಕಂಡು ಬಂದಿದೆ.
ಸೋಂಕಿಗೀಡಾಗಿರುವವರಲ್ಲಿ ವಸತಿ ಶಾಲೆಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಕರ್ನಾಟಕ ಸೇರಿ ಅನ್ಯ ರಾಜ್ಯಗಳಲ್ಲೂ ಕೋವಿಡ್ ರೂಪಾಂತರಿ ಓಮಿಕ್ರಾನ್ ಬೆಳಕಿಗೆ ಬರುತ್ತಿರುವುದನ್ನು ಗಮನಿಸಿದ್ದೇನೆ. ಸೋಂಕು ತಡೆಗೆ ತಜ್ಞರು ಮಾರ್ಗಸೂಚಿಗಳನ್ನು ನೀಡಿದ್ದು, ಅನುಷ್ಠಾನ ಮಾಡಲಾಗುತ್ತಿದೆ. ಕೋವಿಡ್ ಸೋಂಕು ಹರಡುವಿಕೆ ಮೇಲೆ ಸರ್ಕಾರ ನಿಗಾ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ರಾಜ್ಯದ ನಾನಾ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಂಕಿಗೀಡಾಗಿರುವುದು ಕಂಡು ಬಂದಿದೆ. ಪದವಿ, ನರ್ಸಿಂಗ್, ಫಾರ್ಮಸಿ, ಹಾಗೂ ಇತರ ಶಿಕ್ಷಣ ಸಂಸ್ಥೆಗಳಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಂಕಿಗೆ ತುತ್ತಾಗಿದ್ದಾರೆ.
ಈ ವಿಷಯ ತಿಳಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಸೋಂಕಿಗೀಡಾದ ವಿದ್ಯಾರ್ಥಿಗಳ ತರಗತಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ, ಆನ್ಲೈನ್ ಪಾಠಗಳನ್ನು ಮುಂದುವರಿಸಲಾಗಿದೆ ಎಂದಿದ್ದಾರೆ.
ವಸತಿ ಶಾಲೆಗಳ ವಿದ್ಯಾರ್ಥಿಗಳಲ್ಲಿ ಸೋಂಕು : ತಡೆಗೆ ತಕ್ಕ ಕ್ರಮ
Date: