ಸಾಗರದ ವಿದ್ಯಾರ್ಥಿ ಒಕ್ಕೂಟದ ಪ್ರಮುಖರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ಶಾಲೆ-ಕಾಲೇಜುಗಳು ಎದುರಿನ ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಒತ್ತಾಯಿಸಿ ಉಪವಿಭಾಗಧಿಕಾರಿ ಮನವಿ ಸಲ್ಲಿಸಿದ್ದಾರೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂದಿರಾ ಗಾಂಧಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಲ್ ಬಿ ಇನ್ನು ಮುಂತಾದ ಕಾಲೇಜುಗಳ ಎದುರಿನ ರಸ್ತೆ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲೇ ಇದೆ. ವಿದ್ಯಾರ್ಥಿಗಳ ಗುಂಪು ಹೆಚ್ಚಿರುವ ಕಾರಣ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.
ಹೆದ್ದಾರಿಗೆ ಹೊಂದಿಕೊಂಡಂತೆ ಕೆಲವು ಕಾಲೇಜುಗಳ ಎದುರಿನ ರಸ್ತೆ ಬರುವುದರಿಂದ ವಿದ್ಯಾರ್ಥಿಗಳು ರಸ್ತೆದಾಟಲು ತೊಂದರೆ ಉಂಟಾಗುತ್ತಿದೆ. ಹೆದ್ದಾರಿಯಲ್ಲಿ ವಾಹನ ಚಾಲಕರು ಮಿತಿಮೀರಿದ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದಾಗಿ ಕಾಲೇಜಿನ ಎದುರಿನ ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವುದು ಅಗತ್ಯವಾಗಿದೆ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.