ಸರ್ವರನ್ನು ಒಳಗೊಂಡ ಸಮಸಮಾಜ ನಿರ್ಮಾಣಕ್ಕಾಗಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ನೀಡಿರುವ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಂಡು ಪಾಲಿಸಬೇಕು ಎಂದು ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.
ಪ್ರಜಾಪ್ರಭುತ್ವಕ್ಕೆ ಸಂವಿಧಾನವೇ ಅಡಿಪಾಯ. ಸಂವಿಧಾನದಿಂದ ಭಾರತದ ಪ್ರಜಾಪ್ರಭುತ್ವದ ಬೇರುಗಳು ಬಲವಾಗಿವೆ. ದೇಶದಲ್ಲಿರುವಷ್ಟು ಸ್ವಾತಂತ್ರ ಬೇರೆ ಯಾವ ದೇಶಗಳಲ್ಲಿಯೂ ಇಲ್ಲ. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಜನತೆಯನ್ನು ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚಿಸಿರುವ ಸಂವಿಧಾನ ಎತ್ತಿ ಹಿಡಿದಿದೆ ಎಂದರು.
ಡಾ. ಬಿ.ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ತಮ್ಮ ಜೀವನವಿಡೀ ದೇಶದ ಏಳಿಗೆ, ಸಮಾಜದ ಉನ್ನತಿಗಾಗಿ ಶ್ರಮಿಸಿದ ಅಂಬೇಡ್ಕರ್ ಅವರು ಉಜ್ವಲ ಭಾರತದ ಕನಸು ಕಂಡಿದ್ದರು. ಅಸ್ಪೃಶ್ಯತೆ, ಅಸಮಾನತೆ ತೊಡೆದು ಹಾಕುವುದು, ಎಲ್ಲರಿಗೂ ಶಿಕ್ಷಣ, ಉದ್ಯೋಗದ ಸಮಾನ ಅವಕಾಶಗಳು ಸಿಗಬೇಕು ಎಂಬುದು ಅವರ ಮಹದಾಸೆಯಾಗಿತ್ತು. ಆ ದಾರಿಯಲ್ಲಿರುವ ಕೇಂದ್ರ, ರಾಜ್ಯ ಸರ್ಕಾರಗಳು, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಹಲವು ಜನಪರ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿವೆ ಎಂದರು.
ಈ ಸಂದೇಶದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು
ಸಂವಿಧಾನದಿಂದ ಪ್ರಜಾಪ್ರಭುತ್ವ ಬಲವಾಗಿದೆ – ಸಚಿವ ನಾಗೇಶ್
Date: