ತಮಿಳುನಾಡಿನ ಕೂನೂರು ಸಮೀಪ, ಸೇನಾ ಹೆಲಿಕ್ಯಾಪ್ಟರ್ ಪತನಗೊಂಡಿದೆ. ಈ ಪ್ರಕರಣದ ತನಿಖೆಯನ್ನು ಮೂರು ಸೇನೆಗಳ ಸದಸ್ಯರಿರುವ ಸಮಿತಿ ನಡೆಸಲಿದೆ.
ಈ ತನಿಖೆಯು ಏರ್ ಮಾರ್ಷಲ್ ಮಾನ ವೇಂದ್ರ ಸಿಂಗ್ ಅವರ ತನಿಖೆಯ ನೇತೃತ್ವ ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ತನಿಖಾಧಿಕಾರಿಗಳ ತಂಡವು ವೆಲ್ಲಿಂಗ್ಟನ್ ತಲುಪಿದ್ದು,ಅವರು ತನಿಖೆಯನ್ನು ಆರಂಭಿಸಿದ್ದಾರೆ ಎಂದು ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ.
ಪತನಗೊಂಡ ಹೆಲಿಕಾಪ್ಟರ್ ನ ಹಾರಾಟ ದತ್ತಾಂಶ ದಾಖಲಾಗಿರುವ ಬ್ಲಾಕ್ ಬಾಕ್ಸ್ ದೊರೆತಿದೆ. ಪತನಕ್ಕೆ ಸಂಬಂಧಿಸಿ ಮಹತ್ವದ ಸುಳಿವುಗಳು ಬ್ಲಾಕ್ ಬಾಕ್ಸ್ ನಿಂದ ಸಿಗುವ ಸಾಧ್ಯತೆ ಇದೆ. ಸೇನಾ ಪಡೆಗಳ ಮೊದಲ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರೆ 12 ಮಂದಿ ಹೆಲಿಕ್ಯಾಪ್ಟರ್ ಪತನದಲ್ಲಿ ಮೃತಪಟ್ಟಿದ್ದಾರೆ.
ಪತನದ ಸ್ಥಳದ 300 ಮೀಟರ್ ವ್ಯಾಪ್ತಿಯಲ್ಲಿ ಶೋಧವನ್ನು ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಒಂದು ಕಿ. ಮೀ. ಗೆ ವಿಸ್ತರಿಸಿದ ನಂತರ ಬ್ಲಾಕ್ ಬಾಕ್ಸ್ ಸೇರಿ ಎರಡು ಪೆಟ್ಟಿಗೆಗಳು ಸಿಕ್ಕಿವೆ. ಈ ಪೆಟ್ಟಿಗೆಗಳನ್ನು ದೆಹಲಿ ಅಥವಾ ಬೆಂಗಳೂರಿಗೆ ತರಲಾಗುತ್ತದೆ. ಅದರ ದತ್ತಾಂಶಗಳನ್ನು ಸಂಗ್ರಹಿಸಿ, ಹೆಲಿಕಾಪ್ಟರ್ ಪತನದ ಕಾರಣ ಕಂಡುಹಿಡಿಯಲಾಗುವುದು ಅಧಿಕಾರಿಗಳು ಹೇಳಿದ್ದಾರೆ.
ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರು ಜೀವರಕ್ಷಕ ವ್ಯವಸ್ಥೆಯಲ್ಲಿದ್ದಾರೆ. ಪತನದ ಸ್ಥಳದಿಂದ 6 ಕಿ.ಮೀ. ದೂರದ ವೆಲ್ಲಿಂಗ್ಟನ್ ನಲ್ಲಿ ಇರುವ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.