ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ಹಾಗೂ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ರಾತ್ರಿ ಕರ್ಫ್ಯೂ ವಿಧಿಸಬೇಕೇ ಅಥವಾ ಬೇಡವೇ ಎಂಬುವುದನ್ನು ಮುಂದಿನ ವಾರದ ಪರಿಸ್ಥಿತಿಯನ್ನು ಅವಲೋಕಿಸಬೇಕು. ಅನಂತರ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಕ್ರಿಸ್ ಮಸ್ ಹಾಗೂ ಹೊಸ ವರ್ಷ ಆಚರಣೆಯ ವಿಚಾರವಾಗಿ ಮುಂದಿನವಾರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು.
ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ಎಂ. ಕೆ. ಸುದರ್ಶನ್ ಅವರು ಸಂಪುಟ ಸಭೆಯ ಮುಂದೆ ಈ ವಿಚಾರವಾಗಿ ಕೆಲವು ಮಾಹಿತಿಗಳನ್ನು ತಿಳಿಸಿದ್ದಾರೆ. ಅವರು ನೀಡಿದ ವಿವರಗಳು ಮತ್ತು ಕೋವಿಡ್ ದೃಢಪಟ್ಟಿರುವ ಸಂಖ್ಯೆ ನೋಡಿದಾಗ ಯಾರು ಗಾಬರಿಯಾಗುವ ಪರಿಸ್ಥಿತಿ ಸದ್ಯಕ್ಕಿಲ್ಲ ಎಂದು ಮಾನ್ಯ ಮುಖ್ಯಮಂತ್ರಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಹಾಸ್ಟೆಲ್ ಗಳಲ್ಲಿ ಕೆಲವು ಸುರಕ್ಷಿತ ಕ್ರಮಗಳನ್ನು ತೆಗೆದುಕೊಳ್ಳಲು ಸುದರ್ಶನ್ ಅವರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಹಾಸ್ಟೆಲ್ಗಳಲ್ಲಿ ದಿನಕ್ಕೆ ಎರಡು ಬಾರಿ ಸ್ಯಾನಿಟೈಸ್ ಮಾಡಲಾಗುತ್ತದೆ. ಅಡುಗೆ ಮತ್ತಿತರ ಕೆಲಸ ಮಾಡುವವರಿಗೆ ಎರಡು ಲಸಿಕೆ ನೀಡುವುದು. ಸೋಂಕಿತರನ್ನು ಪ್ರತ್ಯೇಕಗೊಳಿಸಲು ಐಸೋಲೇಶನ್ ಕೊಠಡಿ ಸಿದ್ಧಪಡಿಸಲು ಸೂಚಿಸಿದ್ದಾರೆ ಎಂದು ಬೊಮ್ಮಾಯಿ ಅವರು ತಿಳಿಸಿದರು.
ಎರಡು- ಮೂರು ತಿಂಗಳ ಹಿಂದೆ ಕೋವಿಡ್ ಲಸಿಕೆ ವಿಶೇಷ ಅಭಿಯಾನ ನಡೆಸಲಾಯಿತು. ಹೀಗೆ ಮತ್ತೊಂದು ವಿಶೇಷ ಅಭಿಯಾನ ನಡೆಸಬೇಕು. ಇಲ್ಲಿಯವರೆಗೂ ಲಸಿಕೆ ಪಡೆದವರಿಗೆ ಇದರಿಂದ ಅನುಕೂಲವಾಗುತ್ತದೆ. ಸಚಿವ ಸಹದ್ಯೋಗಿಗಳು ಸಲಹೆ ನೀಡಿದ್ದಾರೆ. ಅದಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು.
ಕೇರಳದಿಂದ ಬರುವ ವಿದ್ಯಾರ್ಥಿಗಳು ಹಾಗೂ ಇತರರನ್ನು ಆರ್ ಟಿ ಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ಬರುವುದು ಕಡ್ಡಾಯ. ಉಳಿದಂತೆ ಈಗ ಇರುವ ಮಾರ್ಗಸೂಚಿಯನ್ನು ಮುಂದುವರಿಸಲಾಗುತ್ತದೆ. ಕ್ಲಸ್ಟರ್ ನಿರ್ವಹಣೆಯನ್ನು ಕಟ್ಟುನಿಟ್ಟಾಗಿ ಮಾಡಲಾಗುವುದು. 3 ಜನರಿಗೆ ಕೋವಿಡ್ ದೃಢಪಟ್ಟರೆ ಕ್ಲಸ್ಟರ್ ಎಂದು ಪರಿಗಣಿಸಲಾಗುವುದು. ಹೊಸದಾಗಿ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಧ್ಯಮ ಮಿತ್ರರಿಗೆ ತಿಳಿಸಿದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.