Tuesday, May 26, 2026
Tuesday, May 26, 2026

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ

Date:

ರಾಜ್ಯ ಸರ್ಕಾರ ರಾಜ್ಯಾದ್ಯಂತ ಇರುವಂತಹ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ.

ರಾಜ್ಯದ ಗ್ರಾಮಾಂತರ ಪ್ರದೇಶಗಳ ಶಾಲೆಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಯೆಂದರೆ ಶಿಕ್ಷಕರ ಕೊರತೆ ಈ ಕೊರತೆಯಿಂದಾಗಿ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸದೆ ಖಾಸಗಿ ಶಾಲೆಗೆ ಸೇರಿಸಲು ಮುಂದಾಗುತ್ತಿದ್ದಾರೆ. ಈ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 10 ಸಾವಿರ ಮಂದಿ ಹಾಗೂ ಕಲ್ಯಾಣ ಕರ್ನಾಟಕ ವೃಂದದ 5 ಸಾವಿರ ಮಂದಿ ಪದವೀಧರರ ಶಾಲಾ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ.

5 ಸಾವಿರ ಪದವೀಧರ ಶಿಕ್ಷಕರ ನೇಮಕಕ್ಕೆ ನವೆಂಬರ್ ತಿಂಗಳ ಮೊದಲನೇ ವಾರ ಮತ್ತು 10 ಸಾವಿರ ಪದವೀಧರ ಶಿಕ್ಷಕರ ನೇಮಕಕ್ಕೆ ಡಿಸೆಂಬರ್. 10 ರಂದು ಹಣಕಾಸು ಇಲಾಖೆ ಅನುಮತಿ ನೀಡಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸುವುದಾಗಿ ಹೇಳಿದೆ. ಇದರೊಂದಿಗೆ 4 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಕ್ಕೂ ಅನುಮತಿ ನೀಡಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 23 ಸಾವಿರ ಅತಿಥಿ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ.

ಈ ಬಾರಿ ಪದವಿ, ಬಿ.ಎಡ್ ಮತ್ತು ಟಿಇಟಿ ಪರೀಕ್ಷೆ ಉತ್ತೀರ್ಣರಾದ ಎಲ್ಲಾ ಅಭ್ಯರ್ಥಿಗಳ ಜೊತೆಗೆ ಎಂಜಿನಿಯರಿಂಗ್ ಪದವೀಧರರಿಗೂ ಅರ್ಜಿಸಲ್ಲಿಸಲು ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಎಂಜಿನಿಯರಿಂಗ್ ಪದವೀಧರರು ಗಣಿತ, ವಿಜ್ಞಾನ, ಇಂಗ್ಲಿಷ್, ಪರಿಸರ ಅಧ್ಯಯನ ಸೇರಿದಂತೆ ಇತರೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು “ರಾಜ್ಯದ ಸರ್ಕಾರಿ ಶಾಲೆಗಳಿಗೆ ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಹಣಕಾಸು ಇಲಾಖೆ ಕೂಡ ಅನುಮತಿ ನೀಡಿದೆ. ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಿ, ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...