Thursday, August 13, 2026
Thursday, August 13, 2026

ಪಠ್ಯಪುಸ್ತಕ ಕೊರತೆ ನೀಗಿಸಲು ಶೀಘ್ರ ಕ್ರಮ

Date:

ರಾಜ್ಯ ಸರ್ಕಾರಿ ಶಾಲಾಗಳಿಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಕಾಲದಲ್ಲಿ ಪಠ್ಯಪುಸ್ತಕ ಒದಗಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿ ಅರ್ಧ ವರ್ಷ ಕಳೆದಿದೆ. ಆದರೆ ಲಕ್ಷಾಂತರ ವಿದ್ಯಾರ್ಥಿಗಳ ಕೈಗೆ ಇನ್ನೂ ಪಠ್ಯಪುಸ್ತಕ ಸಿಕ್ಕಿಲ್ಲ.

ಕೋವಿಡ್ ಲಾಕ್ ಡೌನ್ ವೇಳೆ ಅನೇಕ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗಳಿಗೆ ದಾಖಲಿಸಿದರು. ಈ ವರ್ಷ ಸುಮಾರು 2.40 ಲಕ್ಷಕ್ಕಿಂತ ಅಧಿಕ ಮಕ್ಕಳು ಸರ್ಕಾರಿ ಶಾಲೆಗಳಿಗೆ ಸೇರಿದ್ದಾರೆ.

ಶಾಲಾ ಮಕ್ಕಳಿಗೆ ಮಾತ್ರವಲ್ಲದೇ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೂ ಪಠ್ಯಪುಸ್ತಕದ ಕೊರತೆ ಎದುರಾಗಿದೆ. ಈ ಸಮಸ್ಯೆಗೆ ವಿದ್ಯಾರ್ಥಿಗಳ ದಾಖಲಾತಿಯನ್ನು ಸರಿಯಾಗಿ ಪಠ್ಯಪುಸ್ತಕಗಳ ಮುದ್ರಣಕ್ಕೆ ಕಾರ್ಯಾದೇಶ ನೀಡಲು ಅಧಿಕಾರಿಗಳು ಮುಂದಾಗದೆ ಇರುವುದು ಮೂಲ ಕಾರಣವಾಗಿದೆ.

“ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ಕೊರತೆ ಎದುರಾಗಿರುವುದು ನನ್ನ ಗಮನಕ್ಕೆ ಬಂದಿಲ್ಲ ಶಿಕ್ಷಣಕ್ಕಾಗಿ ಎಲ್ಲಾ ವಿದ್ಯಾರ್ಥಿಗಳಿಗೂ ಪಠ್ಯಪುಸ್ತಕಗಳು ಅಗತ್ಯವಾಗಿ ಬೇಕು. ಈ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕ್ರಮಕೈಗೊಳ್ಳಲಾಗುವುದು” ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...