ರೈತ ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಸಿಗಬೇಕು. ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಗಳಿಗಿಂತ ಕಡಿಮೆ ದರದಲ್ಲಿ ಖರೀದಿ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕೃಷಿ ಬೆಲೆ ಆಯೋಗ ಮಾಜಿ ಅಧ್ಯಕ್ಷ ಡಾ. ಟಿ.ಎನ್. ಪ್ರಕಾಶ್ ಕಮ್ಮರಡಿ ಅವರು ಆಗ್ರಹಿಸಿದರು.
ಕೋವಿಡ್ ಸಂದರ್ಭದಲ್ಲಿ ರೈತರು ಅನುಭವಿಸಿದ ಸಮಸ್ಯೆಗಳ ಕುರಿತು ನಾವು ಸಮೀಕ್ಷೆ ನಡೆಸಿದ್ದೇವೆ. 1500 ರೈತರು ಅಭಿಪ್ರಾಯವನ್ನು ಆಧರಿಸಿ, 108 ಪುಟಗಳ ಸಮಗ್ರ ವಿವರ ಒಳಗೊಂಡ ಸಮೀಕ್ಷಾ ವರದಿಯನ್ನು 2021ರಲ್ಲಿ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಇದರಲ್ಲಿ ಪ್ರಸ್ತಾಪಿಸಿದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ರೈತರ ಸಬಲೀಕರಣಕ್ಕಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಯಾವುದೇ ಉತ್ಪನ್ನಕ್ಕೆ ನಿಗದಿಪಡಿಸುವ ಬೆಂಬಲ ಬೆಲೆಗೆ ಕಾನೂನಿನ ಸ್ವರೂಪ ನೀಡಬೇಕು. ಕೃಷಿಕರಿಗೆ ವಿವಿಧ ಸೌಲಭ್ಯ ಒದಗಿಸುವ ಇಲಾಖೆಗಳನ್ನು ಜಾಗೃತಗೊಳಿಸಬೇಕು ಎಂದು ಡಾ. ಟಿ. ಎನ್. ಪ್ರಕಾಶ್ ಕಮ್ಮರಡಿ ಅವರು ಒತ್ತಾಯಿಸಿದರು.
ಮೊದಲ ಲಾಕ್ ಡೌನ್ ನಲ್ಲಿ ರೈತರ ಬೆಳೆಗಳು ಸಂಪೂರ್ಣ ಮಾರಾಟವಾಗಿಲ್ಲ. ಸಾಮಾನ್ಯ ದಿನ ದಿನಗಳಿಗಿಂತ ಕಡಿಮೆ ದರ ದೊರೆತಿದೆ. ಶೇ.70 ರಷ್ಟು ರೈತರು ಸಮೀಕ್ಷೆಯಲ್ಲಿ ತಿಳಿಸಿದ್ದಾರೆ. ಉಳಿದ ವಲಯಗಳಿಗೆ ಹೋಲಿಸಿದರೆ ಕೃಷಿ ವಲಯದ ಬಗ್ಗೆ ಸರ್ಕಾರ ಹೆಚ್ಚಿನ ಗಮನ ಹರಿಸಿಲ್ಲ ಎಂಬುವುದು ಶೇ.54ರಷ್ಟು ರೈತರ ಅಭಿಪ್ರಾಯವಾಗಿದೆ. ಗೋಬಿ ಪರಿಸ್ಥಿತಿ ಸರಿಯಾಗಿ ನಿಭಾಯಿಸಿಲ್ಲ ಎಂದು ಶೇ.55 ರೈತರು ತಿಳಿಸಿದ್ದಾರೆ. ಕೃಷಿಗೆ ಅಗತ್ಯವಿರುವ ಸಾಲ ಸೌಲಭ್ಯ ಮತ್ತು ವಿಮೆ ಸೌಲಭ್ಯ ಸಿಕ್ಕಿಲ್ಲ ಎಂದು ಹಲವಾರು ರೈತರು ಅಭಿಪ್ರಾಯಪಟ್ಟಿದ್ದಾರೆ ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ. ಟಿ.ಎನ್. ಪ್ರಕಾಶ್ ಕಮ್ಮರಡಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
