Monday, July 13, 2026
Monday, July 13, 2026

ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆ ಸ್ಥಾಪನೆಗೆ ನಿರ್ಬಂಧವಿದೆ

Date:

“ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿದ ಪ್ರತಿಮೆಗಳನ್ನು ಹಿಂದು ಮುಂದು ನೋಡದೆ ತೆರವುಗೊಳಿಸಬೇಕು” ಎಂದು ರಾಜ್ಯ ಸರ್ಕಾರಕ್ಕೆ, ಹೈಕೋರ್ಟ್ ಸೂಚನೆಯನ್ನು ನೀಡಿದೆ.

‘ ಸಾರ್ವಜನಿಕ ಪ್ರದೇಶದಲ್ಲಿ ಪ್ರತಿಮೆ ಸ್ಥಾಪನೆ ಮಾಡುವುದಕ್ಕೆ ನಿರ್ಬಂಧವಿದೆ. ಅದು ದೇವರ ಮೂರ್ತಿ ಯಾಗಲಿ ಅಥವಾ ಮಹಾನ್ ವ್ಯಕ್ತಿಯ ಮೂರ್ತಿ ಯಾಗಿರಲಿ ಸಾರ್ವಜನಿಕ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡುವಂತಿಲ್ಲ. ಬೇಕಾದರೆ ಸ್ವಂತ ಜಾಗದಲ್ಲಿ ಪ್ರತಿಮೆ ಸ್ಥಾಪನೆ ಮಾಡಿಕೊಳ್ಳಬಹುದು. ಅದಕ್ಕೆ ನ್ಯಾಯಾಲಯದ ಆಕ್ಷೇಪವಿಲ್ಲ ಎಂದು ಖಡಕ್ಕಾಗಿ ತಿಳಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿದಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ ನಿಲ್ದಾಣದಲ್ಲಿ ವಾಲ್ಮೀಕಿ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಇದನ್ನ ಪ್ರಶ್ನಿಸಿ ಕುವೆಂಪು ಒಕ್ಕಲಿಗರ ಸಂಘ ಹಾಗೂ ಬಿದಲೂರು ಗ್ರಾಮಸ್ಥರು, ಸಾರ್ವಜನಿಕರ ಹಿತದೃಷ್ಟಿಯಿಂದ ಮುಖ್ಯನ್ಯಾಯಮೂರ್ತಿ ಋತುರಾಜ್ ಅವಸ್ಥೆ ಅವರಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಇವರು ನೇತೃತ್ವದ ನ್ಯಾಯಪೀಠ ವಿಚಾರಣೆಯನ್ನು ನಡೆಸಿತು. ಈ ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು, ‘ವಾಲ್ಮೀಕಿ ನಾಯಕರ ಸಂಘವು ಬಿದಲೂರು ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ, ಅನಧಿಕೃತವಾಗಿ ಬಸ್ ನಿಲ್ದಾಣದಲ್ಲಿ ವಾಲ್ಮೀಕಿ ಪ್ರತಿಮೆಯನ್ನು ಸ್ಥಾಪಿಸಿದ್ದಾರೆ. ಇದು ಸಾರ್ವಜನಿಕ ಪ್ರದೇಶದಲ್ಲಿ ದೆ. ಪ್ರತಿಮೆಯನ್ನು ತೆರವುಗೊಳಿಸಲು ಸರ್ಕಾರ ನಿರ್ಧರಿಸಬೇಕು ಎಂದು ಹೇಳಿದರು.

ಇದಕ್ಕೆ ಪ್ರತ್ಯುತ್ತರವಾಗಿ ನ್ಯಾಯಪೀಠ, ಈ ಪ್ರಕರಣದಲ್ಲಿ ಪ್ರತಿಮೆ ತೆರವುಗೊಳಿಸದೆ ಸರ್ಕಾರ ಏಕೆ ಸುಮ್ಮನಿದೆ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಭೆಯಿಂದ ಜನ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತದೆ. ಇಂತಹ ಪ್ರಕರಣಗಳಿಗೆ ಅಂತ್ಯ ಕಾಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...