ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಉದ್ಯೋಗಿಗಳು, ದೇಶದಾದ್ಯಂತ ಮುಷ್ಕರ ನಡೆಸಿದರು. ಇದರಿಂದಾಗಿ ರಾಷ್ಟ್ರೀಕೃತ ಬ್ಯಾಂಕುಗಳ ಶಾಖೆಗಳಲ್ಲಿ ಹಣ ವರ್ಗಾವಣೆ, ಸಾಲ ಮಂಜೂರಾತಿ ಸೇವೆಗಳಿಗೆ ಅಡ್ಡಿಯುಂಟಾಯಿತು.
ಮುಷ್ಕರದಿಂದಾಗಿ ಸುಮಾರು 18,600 ಕೋಟಿ ಮೌಲ್ಯದ 20.4 ಲಕ್ಷ ಚೆಕ್ ಗಳ ಕ್ಲಿಯರೆನ್ಸ್ ಆಗಿಲ್ಲ ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ ಪ್ರಧಾನ ಕಾರ್ಯದರ್ಶಿ ಸಿ. ಎಚ್. ವೆಂಕಟಾಚಲಂ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಬದಲಾಗದ ಧೋರಣೆಯಿಂದಾಗಿ ಒಂದು ಲಕ್ಷಕ್ಕಿಂತಲೂ ಅಧಿಕ ಬ್ಯಾಂಕ್ ಶಾಖೆಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಕಾರ್ಯನಿರ್ವಹಣೆಗೆ ಅಡ್ಡಿ ಉಂಟಾಯಿತು ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಸೌಮ್ಯ ದತ್ತಾ ಅವರು ತಿಳಿಸಿದ್ದಾರೆ.
9 ಸಂಘಟನೆಗಳನ್ನು ಒಳಗೊಂಡಿರುವ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ ಎರಡು ದಿನಗಳ ಮುಷ್ಕರ ಕರೆ ನೀಡಿದೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ವಿಮಾ ಕಂಪನಿಗಳ ಖಾಸಗೀಕರಣ, ಭಾರತೀಯ ಜೀವ ವಿಮಾ ನಿಗಮದಲ್ಲಿನ ಬಂಡವಾಳ ಹಿಂತೆಗೆತ, ವಿಮಾ ಕ್ಷೇತ್ರದಲ್ಲಿ ಶೇ.24ರವರೆಗೆ ಎಫ್ ಡಿಐ ಗೆ ಅವಕಾಶ ದಂತಹ ಕೇಂದ್ರ ಸರ್ಕಾರದ ನಿರ್ಧಾರಗಳಿಗೆ ಯುಎಫ್ ಬಿಯು ತನ್ನ ವಿರೋಧವನ್ನು ವ್ಯಕ್ತಪಡಿಸಿದೆ.
ಕರ್ನಾಟಕದಲ್ಲಿಯೂ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳು ಮುಷ್ಕರದಲ್ಲಿ ಭಾಗವಹಿಸಿದ್ದರು. ಇದರಿಂದಾಗಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸೇವೆಗಳು ಲಭ್ಯವಾಗಲಿಲ್ಲ ಎಂದು ನೌಕರರ ಸಂಘಟನೆಯ ಮುಖಂಡರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕೆ. ಜಿ. ರಸ್ತೆಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಕಚೇರಿಯ ಬಳಿ ಸುಮಾರು ಸಾವಿರದ ಐನೂರಕ್ಕೂ ಹೆಚ್ಚು ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಕೇಂದ್ರ ಸರ್ಕಾರದ ನಿರ್ಧಾರಗಳ ವಿರುದ್ಧ ಪ್ರತಿಭಟನೆಯನ್ನು ನಡೆಸಿದ್ದಾರೆ. ಈ ಮಾಹಿತಿಯನ್ನು ಭಾರತೀಯ ರಾಷ್ಟ್ರೀಯ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಎಂ.ಕೆ. ಅವರು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.