ಬೆಂಗಳೂರು ನಗರದ ಸ್ಯಾಂಕಿ ಕೆರೆ ಬಳಿಯಿರುವ ಶಿವಾಜಿ ಪ್ರತಿಮೆಗೆ ಮಸಿ ಬೆಳಿದಿರುವ ನಾಲ್ವರು ಕಿಡಿಗೇಡಿಗಳು ಸ್ಥಳೀಯರು ಎಂಬುದನ್ನು ಪತ್ತೆ ಹಚ್ಚಿರುವ ಪೊಲೀಸರು, ಶೀಘ್ರದಲ್ಲೇ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಕಿಡಿಗೇಡಿಗಳ ಕೃತ್ಯಕ್ಕೆ ಸರಕಾರ, ಪೊಲೀಸ್ ಇಲಾಖೆ, ನಿರ್ಲಕ್ಷ್ಯ ಎಂದು ಹೇಳಲಾಗದು. ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವ ಶಕ್ತಿ ಸರಕಾರ ಹಾಗೂ ಪೊಲೀಸ್ ಇಲಾಖೆಗೆ ಇದೆ. ಆ ಕೆಲಸ ಮಾಡಬೇಕು ಎಂದೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ನಗರದಾದ್ಯಂತ ಇರುವ ಎಲ್ಲಾ ಪ್ರತಿಭೆಗಳಿಗೂ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ನಗರದ ಮರಾಠ ಸಮುದಾಯದ ಕಾಲೇಜುಗಳು, ವಿದ್ಯಾರ್ಥಿ ನಿಲಯ, ಕಟ್ಟಡಗಳು ಹಾಗೂ ಮಹಾರಾಷ್ಟ್ರ ದಿಂದ ಬರುವ ಬಸ್ ಗಳಿಗೆ ಯಾವುದೇ ಹಾನಿಯಾಗದಂತೆ ಪೊಲೀಸರು ನಿಗಾ ವಹಿಸಿದ್ದಾರೆ ಇಷ್ಟೇ ಅಲ್ಲದೆ, ಸೂಕ್ಷ್ಮ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡಬಾರದೆಂದು ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ಕನ್ನಡಿಗರ ಹೆಮ್ಮೆ. ಅವರು ಪ್ರತಿಮೆಯನ್ನು ಹಾಳುಗೆಡವಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೆಲವರು ಅರಾಜಕತೆ ಸೃಷ್ಟಿ ಮಾಡಲು ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಸಂಘರ್ಷ ಸೃಷ್ಟಿಯಾಗುವಂತೆ ಮಾಡಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ತಿಳಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.